ಬೆಳಗಾವಿ, ಫೆ ೮, ಕಬ್ಬಿನ ಕಟಾವಿಗೆ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯತ್ತಿದ್ದ ಟ್ರ್ಯಾಕ್ಟರ್ ವೊಂದು ಸೇತುವೆ ಮೇಲಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಟ ಆರು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ದುರ್ಘಟನೆ ಜಿಲ್ಲೆ ಖಾನಾಪುರ ತಾಲೊಕಿನ ಬೋಗೂರ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಬೋಗೋರ ಗ್ರಾಮದ ಸಾವಿತ್ರಿ ಬಾಬು ಹುಣಸೇ ಕಟ್ಟಿ, ತಂಗಮ್ಮ ಯಲ್ಲಪ್ಪ ಹುಣಸೇಕಟ್ಟಿ, ಅಶೋಕ ಫಕೀರಪ್ಪ, ಶಾಂತಮ್ಮ ಯಲ್ಲಪ್ಪ, ಶಾಂತವ್ವ ಹನುಮಂತ ಅಳಗುಂಡಿ, ನಾಗವ್ವ ಎಂದು ಗುರುತಿಸಲಾಗಿದೆ. ಗ್ರಾಮದ ಸಮೀಪದ ೩೦ ಅಡಿ ಎತ್ತರದ ಸೇತುವೆ ಮೇಲಿಂದ ಟ್ರಾಕ್ಟರ್ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆಅಪಘಾತ ನಡೆದ ಸ್ಥಳದಲ್ಲಿ ನಾಲ್ವರು ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಇನ್ನ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.