ಬೆಳಗಾವಿ : ಬುಧವಾರ ರಾತ್ರಿ ಬೆಳಗಾವಿಯ ಕೆ.ಎಮ್ಎಫ್ ಬಳಿ ನಡೆದ ಯುವಕನ ಮೇಲಿನ ಗುಂಡಿನ ದಾಳಿಗೆ ಲವ್ ಧೋಖಾ ಕಾರಣ ಎಂಬುವದು ವರದಿಯಾಗಿದ್ದು, ಕೊನೆಗೂ ಈ ಗುಂಡಿನ ದಾಳಿಯ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಆರೋಪಿತರನ್ನು ಬಂಧಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಆಸ್ಪತ್ರೆಯಲ್ಲಿರುವ ಯುವಕನಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.
ಬೆಳಗಾವಿಯ ಆಂಜನೇಯ ನಗರದಲ್ಲಿ ಬುಧವಾರ ಸಂಜೆ ಟಿಳಕವಾಡಿಯ ದ್ವಾರಕಾನಗರದ ಪ್ರಣಿತ್ ಕುಮಾರ್ ಅವರು ಗೆಳತಿ ಸ್ಮಿತಾ ಎನ್ನುವರ ಮನೆಗೆ ಊಟಕ್ಕೆ ಹೋಗಿದ್ದನು. ಇದೇ ವೇಳೆ ಪ್ರಣಿತ್ ನ ಮಾಜಿ ಗೆಳತಿ ಸ್ಮಿತಾಳ ಅವಳ ಮನೆಗೆ ಬಂದಿದ್ದಾಳೆ. ಮನೆಯಲ್ಲಿ ಸ್ಮಿತಾ ಒಬ್ಬಳೆ ಇದ್ದು ಆಕೆಯ ಮನೆಗೆ ಪ್ರಣಿತ್ ಯಾಕೆ ಬಂದ ಎಂದು ಅನುಮಾನಗೊಂಡು ಪ್ರಣಿತ್ ಜೊತೆಗೆ ಜಗಳಕ್ಕಿಳಿದಿದ್ದಾಳೆ.
ಈ ವೇಳೆ ಸ್ಮಿತಾ ಎಂಟ್ರಿಯಾಗಿ ಇಬ್ಬರ ನಡುವಿನ ಜಗಳ ಬಗೆ ಹರಿಸುವ ಕೆಲಸ ಮಾಡಿದ್ದಾಳೆ. ಮಾಜಿ ಪ್ರೇಯಸಿಯ ಹಿಂದೆ ಮತ್ತೆ ಮೂರು ಜನ ಬಂದಿದ್ದಾರೆ. ಪ್ರಣಿತ್ ಮೇಲೆ ಹಲ್ಲೆ ಮಾಡಿ ಜೊತೆಗೆ ತಂದಿದ್ದ ಗನ್ ಬಂದೂಕುನಿಂದ ಗುಂಡಿನ ದಾಳಿ ಮಾಡಿದ್ದಾರೆ. ಗುಂಡಿನ ದಾಳಿಯಿಂದ ಪ್ರಣಿತ್ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾನೆ. ಗುಂಡು ಹಣೆ ಭಾಗದಿಂದ ಕಿವಿ ಪಕ್ಕ ಹಾದುಗೋಗಿದೆ. ಇತ್ತ ಆರೋಪಿಗಳು ಮತ್ತೊಂದು ಬಾರಿ ಗುಂಡಿನ ದಾಳಿ ಮಾಡಿದ್ದು ಅದು ತೊಡೆಯ ಭಾಗಕ್ಕೂ ತಗುಲಿದೆ. ಅಗ ಫೈರ್ ಆಗಿಲ್ಲ. ತಕ್ಷಣ ನಾಲ್ಕು ಆರೋಪಿಗಳು ಪರಾರಿಯಾಗಿದ್ದರು.
ರಕ್ತದ ಮಡುವಿನಲ್ಲಿ ಬಿದ್ದ ಪ್ರಣಿತ್ನನ್ನು ಸ್ಮಿತಾ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಳಮಾರುತಿ ಠಾಣೆ ಪೊಲೀಸರಿಗೆ ವಿಷಯ ಗೊತ್ತಾಗಿದೆ. ಪೊಲೀಸರು ಆಸ್ಪತ್ರೆಗೆ ಬಂದು ಹಲ್ಲೆಗೊಳಗಾದ ಪ್ರಣಿತ್ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಣಿತ್ ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದರು. ಡಿಸಿಪಿ ರೋಹನ್ ಜಗದೀಶ್ ಸಾಥ್ ನೀಡಿದ್ದರು.
ಎಸಿಪಿ ನೇತೃತ್ವದ ಎರಡು ತಂಡ ರಚನೆ ಮಾಡಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಬಳಕೆಯಾದ ಗನ್ ಯಾವುದು ಎಂಬುದರ ಕುರಿತ ತನಿಖೆ ನಡೆಸಲಾಗುತ್ತಿದೆ. ಪ್ರೀತಿ ವಿಚಾರಕ್ಕೆ ಗಲಾಟೆಯಾಗಿದ್ದು ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ. ಐಸಿಯುವಿನಲ್ಲಿ ಪ್ರಣಿತ್ಗೆ ಚಿಕಿತ್ಸೆ ಮುಂದುವರಿದಿದೆ.