ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಅಂಗೀಕಾರಕ್ಕೆ ಕರವೇ ಆಗ್ರಹ
Belgaum is an integral part of Karnataka, demand for recognition is urgent
ಬೆಳಗಾವಿ 31: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ ವರದಿಯೇ ಅಂತಿಮ ಹಾಗೂ ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಅಂಗೀಕರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಕಿತ್ತೂರು ಕರ್ನಾಟಕ ಯುವ ಸೇನೆಯ ಕಾರ್ಯಕರ್ತರು ಮಂಗಳವಾರ ಮಹಾನಗರ ಪಾಲಿಕೆ ಕಛೇರಿ ಎದುರು ಪ್ರತಿಭಟಿಸಿ, ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಮಹಾನಗರ ಪಾಲಿಕೆಯಲ್ಲಿ ಈಗ ಕನ್ನಡಿಗರ ಸದಸ್ಯರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ವಿಶೇಷ ಸರ್ವ ಸಾಧಾರಣ ಸಭೆ ಕರೆದು ಕರ್ನಾಟಕದ ಪರವಾದ ಮಹತ್ವದ ನಿರ್ಣಯಗಳನ್ನು ಅಂಗೀಕರಿಸಬೇಕು. ಗಡಿ ವಿವಾದ ಸಂಬಂಧ ಮಹಾನಗರ ಪಾಲಿಕೆಯು ಕನ್ನಡಿಗರ ಹಿತ ಕಾಯುವ ನಿರ್ಣಯಗಳನ್ನು ಕೈಗೊಳ್ಳಬೇಕು. ಅದಲ್ಲದೆ, ನಾಮಫಲಕಗಳಲ್ಲಿ ಸರಕಾರದ ಆದೇಶದಂತೆ ಶೇ.60 ರಷ್ಟು ಕಡ್ಡಾಯ ಕನ್ನಡ ಬಳಕೆ ಅನುಷ್ಠಾನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಕಿತ್ತೂರು ಕರ್ನಾಟಕ ಯುವ ಸೇನೆಯ ರಾಜ್ಯ ಅಧ್ಯಕ್ಷ ಮಹೇಶ ಶೀಗಿಹಳ್ಳಿ ಮಾತನಾಡಿ, ನಾಮಫಲಕಗಳಲ್ಲಿ ಶೇ. 60 ರಷ್ಟು ಕಡ್ಡಾಯ ಕನ್ನಡ ಬಳಕೆ ಅನುಷ್ಠಾನಗೊಳಿಸುವಲ್ಲಿ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗಳು ವಿಫಲರಾಗಿದ್ದಾರೆ. ಹಾಗಾಗಿಯೇ ವಿಶೇಷ ಹಬ್ಬಗಳ ಸಂದರ್ಭದಲ್ಲಿ ಅನ್ಯ ಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ. ಆದರೂ ಕೂಡ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದ ಅವರು, ನಗರದಲ್ಲಿ ನಿಷೇಧಿತ ಸ್ಥಳದಲ್ಲಿ ಕಸ ಎಸೆದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳುತ್ತಿದ್ದೀರೂ ಅದೇ ರೀತಿ ನಗರದಲ್ಲಿ ಅನ್ಯ ಭಾಷೆ ನಾಮಫಲಕಗಳನ್ನು ಅಳವಡಿಸಿದವರ ಮೇಲೆಯೂ ಕ್ರಮ ಕೈಗೊಳ್ಳಲು ಮುಂದಾಗಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಾಲಿಕೆ ಕಚೇರಿ ಆವರಣದಲ್ಲಿ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಈರೇಶ ನಾಯಕ, ಲಕ್ಷ್ಮಣ ಬಿ, ಕಾರ್ತಿಕ ಪಾಟೀಲ, ಶಿವು ಕರಡಿಗುದ್ದಿ, ಸಿಂಧೂರ ನಾಗನ್ನವರ, ಸಚಿನ ಕೆ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 