ಲೋಕದರ್ಶನ ವರದಿ
ಬಳ್ಳಾರಿ 28: ತಮ್ಮ ಸಮಸ್ಯೆಗಳು ಸರಕಾರಿ ಅಧಿಕಾರಿಗಳು ಕೇಳುತ್ತಿಲ್ಲ; ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರಿಂದ ಬರುವ ಗೋಳಿನ ವ್ಯಥೆಗೆ ಇನ್ಮುಂದೆಗೆ ಬ್ರೇಕ್ ಬಿಳಲಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅದಕ್ಕಿಟ್ಟಿರುವ ಹೆಸರು ಇ-ಸ್ಪಂದನೆ!.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸುವ ಕಂಟ್ರೋಲ್ ರೂಂ ಪ್ರಾರಂಭಿಸಲಾಗಿದ್ದು,ಇದಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಂಗಳವಾರ ಉದ್ಘಾಟಿಸಿದರು.
ಸಾರ್ವಜನಿಕರ ಕುಂದುಕೊರತೆಗಳಿಗೆ ತತ್ಕ್ಷಣ ಸ್ಪಂದಿಸುವ ಉದ್ದೇಶದಿಂದ ಈ ಕಂಟ್ರೋಲ್ ರೂಂ ಆರಂಭಿಸಲಾಗುತ್ತಿದ್ದು,ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು. ಸಾರ್ವಜನಿಕ ಕುಂದುಕೊರತೆಗಳನ್ನು ವಿದ್ಯುನ್ಮಾನ ವ್ಯವಸ್ಥೆಯ ಮುಖಾಂತರ ಶೀಘ್ರವಾಗಿ ಪರಿಹರಿಸಲಾಗುತ್ತದೆ.
ಇದಕ್ಕೆ ಒಂದು ವಾಟ್ಸ್ಆ್ಯಪ್ ನಂ:8277888866 ಮೊಬೈಲ್ ನಂಬರ್ ಫಿಕ್ಸ್ ಮಾಡಲಾಗುತ್ತಿದ್ದು, ಅದಕ್ಕೆ ಸಾರ್ವಜನಿಕರು ಯಾವುದೇ ಇಲಾಖೆಗೆ ಸಂಬಂಧಿಸಿದ ದೂರು/ಸಮಸ್ಯೆ/ಕುಂದುಕೊರತೆಗಳಿದ್ದಲ್ಲಿ ಈ ನಂಬರ್ಗೆ ಸಂಬಂಧಿಸಿದ ಫೋಟೊ/ವಿಡಿಯೋ/ಸಂದೇಶಗಳನ್ನು(ವಿವರಗಳೊಂದಿಗೆ) ಸಲ್ಲಿಸಬಹುದಾಗಿದೆ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಬಹುದಾಗಿದೆ.
ತಮ್ಮ ದೂರು/ಸಮಸ್ಯೆ/ಕುಂದುಕೊರತೆಗಳ ಪರಿಹಾರಕ್ಕಾಗಿ ಆ ಸಂದೇಶಗಳನ್ನು ಸಂಬಂಧಪಟ್ಟ ಇಲಾಖೆಗೆ ಶೀಘ್ರವಾಗಿ ರವಾನಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಅದೇ ರೀತಿ 1077 ಸಂಖ್ಯೆಗೆ ಉಚಿತವಾಗಿ ಕರೆ ಮಾಡಬಹುದು ಅಥವಾ 08392-277100 ಸಂಖ್ಯೆಗೆ ಕರೆ ಮಾಡಿ ಸಹ ಅಹವಾಲುಗಳ ಮೂಲಕ ದೂರು ದಾಖಲಿಸಬಹುದು.
ಡಿಸಿ ಕಚೇರಿಯಲ್ಲಿ ಆರಂಭಿಸಲಾಗಿರುವ ಈ ಇ-ಸ್ಪಂದನೆ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದೂರುದಾರರ ಹೆಸರು, ದೂರಿನ ವಿವರ ಹಾಗೂ ವಿಳಾಸ ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಯಾವ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಇರುತ್ತದೆಯೋ ಅದಕ್ಕೆ ಸಂಬಂಧಿಸಿದ ಜಿಲ್ಲಾಮಟ್ಟದ ಅಥವಾ ತಾಲೂಕುಮಟ್ಟದ ಅಧಿಕಾರಿಗಳಿಗೆ ಎಸ್ಎಂಎಸ್ ಮೂಲಕ ರವಾನಿಸಲಿದ್ದಾರೆ. ಬರಲಿರುವ ಎಸ್ಎಂಎಸ್ ಲಿಂಕ್ನ್ನು ಒತ್ತುವುದರ ಮೂಲಕ ನೋಡಿಕೊಂಡು ಅದಕ್ಕೆ ಸಂಬಂಧಿಸಿದ ನಿಧರ್ಿಷ್ಠ ಉತ್ತರವನ್ನು ಹಾಗೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳುಹಿಸಲಿದ್ದಾರೆ. ಅವರು ಕಳುಹಿಸಿರುವುದಕ್ಕೆ ಸ್ವೀಕೃತಿ ಮತ್ತು ದೂರುದಾರರಿಗೂ ಕೂಡ ತಮ್ಮ ದೂರಿನ ಪ್ರಗತಿಯನ್ನು ಅವರಿಗೆ ಬರಲಿರುವ ಎಸ್ಎಂಎಸ್ ಲಿಂಕ್ ಮೂಲಕವೇ ವೀಕ್ಷಿಸಬಹುದಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಇ-ಸಂದನ ಕೋಶಕ್ಕೆ ಮಾತ್ರ ಲಾಗೀನ್ ವ್ಯವಸ್ಥೆ ಇರುತ್ತದೆ.
ಅಧಿಕಾರಿಗಳಿಗೆ ಯಾವುದೇ ರೀತಿಯ ಲಾಗಿನ್ ಇರುವುದಿಲ್ಲ. ಎಸ್ಎಂಎಸ್ನಲ್ಲಿ ಬಂದಿರುವ ವೆಬ್ಲಿಂಕ್ನ್ನು ಕ್ಲಿಕ್ಕಿಸಿ,ಸದರಿ ಕುಂದುಕೊರತೆಯ ಬಗ್ಗೆ ತಮ್ಮ ಕ್ರಮವನ್ನು ನಮೂದಿಸಲಿದ್ದಾರೆ. ಅಧಿಕಾರಿಗಳು ತಮ್ಮ ಹಂತದಲ್ಲಿ ಕ್ರಮವಹಿಸದೆ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸಬಹುದಾಗಿದೆ.
ಕುಂದುಕೊರತೆಗಳನ್ನು ವರ್ಗಿಕರಿಸಲು ಆಯಾ ವರ್ಗದ ಕುಂದುಕೊರತೆಗಳಿಗೆ ಅಧಿಕಾರಿಗಳು ಕ್ರಮವಹಿಸಲು ನಿರ್ಧಿಷ್ಠ ದಿನಗಳನ್ನು ನಿಗದಿಪಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ವಿವರಿಸುತ್ತಾರೆ.
ಇ-ಸ್ಪಂದನೆ ವೆಬ್ಸೈಟ್ನ್ನು ಬಳ್ಳಾರಿಯ ಎನ್ಐಸಿ ತಂಡದ ಅಧಿಕಾರಿಗಳಾದ ಶಿವಪ್ರಕಾಶ ವಸ್ತ್ರದ ಮತ್ತು ವೆಂಕಟರಮಣ ನೇತೃತ್ವದ ತಂಡ ಅಭಿವೃದ್ಧಿಪಡಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಎನ್ಐಸಿ ಅಧಿಕಾರಿಗಳಾದ ಶಿವಪ್ರಕಾಶ ವಸ್ತ್ರದ್, ವೆಂಕಟರಮಣ, ತಹಸೀಲ್ದಾರ್ ವಿಶ್ವಜಿತ್ ಮೆಹತಾ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.