ಬಳ್ಳಾರಿ: 17 ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ

ಲೋಕದರ್ಶನ ವರದಿ

ಬಳ್ಳಾರಿ 07: ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಆಸ್ಪತ್ರೆಗಳ ಶುಚಿತ್ವಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿಗೆ ಬಳ್ಳಾರಿ ಜಿಲ್ಲಾಸ್ಪತ್ರೆ ಸೇರಿ 17 ಆರೋಗ್ಯ ಕೇಂದ್ರಗಳು ಆಯ್ಕೆಯಾಗಿವೆ. 

      ಬೆಂಗಳೂರಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಪ್ರಶಸ್ತಿ ಪ್ರದಾನ ಮಾಡಿದರು. 

      ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದಶರ್ಿ ಜಾವೇದ್ ಅಖ್ತರ್, ಆಯುಕ್ತರಾದ ಪಂಕಜ್ ಕುಮಾರ ಪಾಂಡೆ, ಅಭಿಯಾನ ನಿರ್ದೇಶಕರಾದ ವಿನ್ಸೆಂಟ್ ಡಿಸೋಜಾ, ಡಾ.ಪ್ರಭಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್. ಜನಾರ್ಧನ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್.ಬಸರೆಡ್ಡಿ, ಡಿಕ್ಯೂಎಎಮ್ ಡಾ.ಲಕ್ಷ್ಮಿಕಾಂತ ಸೇರಿದಂತೆ 17 ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.