ಲೋಕದರ್ಶನ ವರದಿ
ಬಳ್ಳಾರಿ 19: ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಬಳ್ಳಾರಿ, ಸಂಡೂರು ಮತ್ತು ಕುರುಗೋಡಿನಲ್ಲಿ ಉಚಿತ ಲ್ಯಾಪ್ಟಾಪ್ ಎಲ್ಲಾ ಪದವಿ ವಿದ್ಯಾರ್ಥಿಗಳಿಗೂ ನೀಡಬೇಕೆಂದು ಮನವಿ ಸಲ್ಲಿಸಲಾಯಿತು. ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಸರ್ಕಾರ 2019-2020ನೇ ವರ್ಷದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುತ್ತಿರುವುದು ಶ್ಲಾಘನೀಯ.
ದ್ವೀತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಫಲ ಸಿಗದೇ ಇರುವುದು ವಿಷಾದನೀಯ. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನು ಕೇವಲ 2-3 ತಿಂಗಳಲ್ಲಿ ಹೊರ ಹೋಗುತ್ತಾರೆ. ಲ್ಯಾಪ್ಟಾಪ್ ನೀಡುವುದರಿಂದ ತಮ್ಮ ಉನ್ನತ ವ್ಯಾಸಾಂಗ ನಡೆಸಲು ಅನುಕೂಲವಾಗುತ್ತದೆ.
ಕಳೆದ ಎರಡು ವರ್ಷಗಳಿಂದ ಉಚಿತ ಲ್ಯಾಪ್ಟಾಪ್ ವಿತರಣೆಗಾಗಿ ಮೀಸಲಿಟ್ಟ ಹಣ ಏನಾಯಿತು? ವಿವೇಕಾನಂದ ಜಯಂತಿಯ ದಿನದಂದು ರಾಜ್ಯ ಸರ್ಕಾರ ಒಂದು ಕಾರ್ಯಕ್ರಮವನ್ನು ಆಯೋಜಿಸಿ ಲ್ಯಾಪ್ಟಾಪ್ ವಿತರಣೆಯನ್ನು ನಡೆಸಿತ್ತು. ಆದರೆ, ಎಲ್ಲಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲು ಸರ್ಕಾರ ವಿಫಲವಾಗಿದೆ. ಹೆಸರಿಗೆ ಮಾತ್ರ ಕೆಲವರಿಗೆ ನೀಡಿ, ಬಹುಪಾಲು ವಿದ್ಯಾಥರ್ಿಗಳನ್ನು ವಂಚಿತರನ್ನಾಗಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ವತಿಯಿಂದ ರಾಜ್ಯಾದ್ಯಾಂತ ಇಂದು ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಬಳ್ಳಾರಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರವಿಕಿರಣ್.ಜೆಪಿ, ಜಿಲ್ಲಾ ಸೆಕ್ರೆಟರಿಯೆಟ್ ಸದಸ್ಯರಾದ ಈರಣ್ಣ, ಶಾಂತಿ ಮತ್ತಿತರ ಪದವಿ ವಿದ್ಯಾರ್ಥಿಗಳು ನಿಯೋಗದಲ್ಲಿದ್ದರು. ಸಂಡೂರಿನಲ್ಲಿ ಮಾನ್ಯ ತಹಶೀಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸೆಕ್ರೆಟರಿಯೆಟ್ ಸದಸ್ಯರಾದ ಮಂಜು ಹಾಗೂ ಮತ್ತಿತರ ಪದವಿ ವಿದ್ಯಾರ್ಥಿಗಳು ನಿಯೋಗದಲ್ಲಿದ್ದರು.