ಬಳ್ಳಾರಿ: ಗಮನ ಸೆಳೆದ ಸರ್ವಜ್ಞ ಜಯಂತಿ ಮೆರವಣಿಗೆ
ಲೋಕದರ್ಶನ ವರದಿ
ಬಳ್ಳಾರಿ 20: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಸಂತಕವಿ ಸರ್ವಜ್ಞ ಜಯಂತಿಯ ಅಂಗವಾಗಿ ಏರ್ಪಡಿಸಿದ್ದ ಸಂತಕವಿ ಸರ್ವಜ್ಞರ ಬೃಹತ್ ಭಾವಚಿತ್ರದ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕರಾದ ಸಿದ್ದಲಿಂಗೇಶ್ ಕೆ ರಂಗಣ್ಣವರ ಅವರು ಗುರುವಾರ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು.
ಈ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಹಾಗೂ ವೇಷಧಾರಿಗಳ ಪ್ರದರ್ಶನಗಳು ಜನರ ಗಮನಸೆಳೆದವು. ಮೆರವಣಿಗೆಯಲ್ಲಿ ಜಿಲ್ಲಾ ಕುಂಬಾರ ಶಾಲಿವಾಹನ ಸಂಘದ ಜಿಲ್ಲಾಧ್ಯಕ್ಷ ಕೆ.ರಂಗಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು, ಕುಂಬಾರ ಸಮುದಾಯದ ಮುಖಂಡರು, ಜನರು ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಮತ್ತು ಇತರೆ ಗಣ್ಯವ್ಯಕ್ತಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 