ಲೋಕದರ್ಶನ ವರದಿ
ಬಳ್ಳಾರಿ: ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ 17: ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ 3 ವರ್ಷಗಳ ಅವಧಿಗೆ ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ 01.07.2022 ರಿಂದ 30.06.2025 ರ ವರೆಗೆ ಪ್ಯಾನೆಲ್ ವಕೀಲರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಈ ಹುದ್ದೆಗಳ ಅವಧಿಯು 30.06.2025 ರಂದು ಮುಕ್ತಾಯಗೊಳ್ಳಲಿದೆ. ಮುಂದಿನ ಮೂರು ವರ್ಷಗಳ ಅವಧಿಗೆ (01.07.2025 ರಿಂದ 30.06.2028 ರ ವರೆಗೆ) ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿರಬೇಕು. ಕಾನೂನು ಅಭ್ಯಾಸದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಮಾನ್ಯತೆವುಳ್ಳ ಅಭ್ಯಾಸ ಪ್ರಮಾಣಪತ್ರ ಹೊಂದಿರಬೇಕು. ಕ್ರಿಮಿನಲ್ ಪ್ರಕರಣ ಹೊಂದಿರಬಾರದು. ಸ್ಥಳೀಯ ಭಾಷೆಯ ಜ್ಞಾನ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಮೇ 03 ಕೊನೆಯ ದಿನವಾಗಿದೆ. ಸಂದರ್ಶನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಅಥವಾ ದೂ.08392-278077 ಹಾಗೂ ಇಮೇಲ್: ಛಚಿಟಟಚಿಡಿ.ಜಚಿಅರಟಚಿಟ.ಛಿಠ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.