ಬಳ್ಳಾರಿ: ಫಲಾನುಭವಿಗಳ ಸಂವಾದ ಕಾರ್ಯಕ್ರಮ

ಲೋಕದರ್ಶನ ವರದಿ

ಬಳ್ಳಾರಿ 20: ಕಲ್ಯಾಣ ಕನರ್ಾಟಕ ಭಾಗದಿಂದ ಬಂದಿರುವ ನಾನು ಈ ಭಾಗದ ಮಹಿಳೆಯರ ಹಾಗೂ ಲೈಂಗಿಕ ಅಲ್ಪಸಂಖ್ಯಾಂತರ ಕಲ್ಯಾಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮತ್ತು ತರಲಿರುವ ಯೋಜನೆಗಳನ್ನು ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕನರ್ಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಗ್ರಾಮೀಣ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಧನಶ್ರೀ, ಚೇತನಾ, ಲಿಂಗತ್ವ ಅಲ್ಪಸಂಖ್ಯಾತ ಒಕ್ಕೂಟದ ಅಧಿಕಾರಿಗಳ ಮತ್ತು ಫಲಾನಭವಿಗಳ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಮಹಿಳೆ ತಲೆಎತ್ತಿ ಬಾಳಿದರೆ ಸಮಾಜವೇ ತಲೆ ಎತ್ತಿ ಬಾಳಿದಂತೆ; 

ಆದ ಕಾರಣ ಯಾವುದೇ ಕಾರಣಕ್ಕೂ ಭಿಕ್ಷಾಟನೆ ಮತ್ತು ಲೈಂಗಿಕ ಕಾರ್ಯಗಳನ್ನು ಮಾಡಬೇಡಿ, ನಿಗಮದ ವತಿಯಿಂದ ವಿವಿಧ ಯೋಜನೆಗಳ ಅಡಿಯಯಲ್ಲಿ ಕಿರು ಸಾಲ ಸೌಲಭ್ಯಗಳನ್ನು ನೀಡುತ್ತೇವೆ. ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಿ ಎಂದರು. ಮಧ್ಯವತರ್ಿಗಳ ನೆರವು ಕೋರದೇ ನೇರವಾಗಿಯೇ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಸಬ್ಸಿಡಿಗಳನ್ನು ನಿಗಮ ನೀಡುವುದಿಲ್ಲ ಹಾಗೂ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಧಮನಿರತ ಮಹಿಳೆಯರಿಗೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ಮತ್ತು ದೇವದಾಸಿ ಮಹಿಳೆಯರಿಗೆ ವಸತಿ ಯೋಜನೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಅಶ್ವಾಸನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕರಾದ ಆರ್.ನಾಗರಾಜ್ ಅವರು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾತೃಪೂರ್ಣ ಯೋಜನೆಯ ಚಿಕ್ಕಿ ಘಟಕವನ್ನು ಹೊಸಪೇಟೆ ತಾಲೂಕಿನಲ್ಲಿಯೂ ಸ್ಥಾಪಿಸಿ ಧಮನಿರತ ಮಹಿಳೆಯರಿಗೆ ಹೋಲಿಗೆ ಯಂತ್ರದ ತರಬೇತಿ ನೀಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದರು.

ಈ ಸಭೆಯಲ್ಲಿ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಹಾಗೂ ಹೆಚ್ಚಿನ ಸೌಲಭ್ಯಗಳ, ಕುಂದು ಕೊರತೆಗಳ ಕುರಿತಂತೆ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಶಶಿಕಲಾ, ನಿರೂಪಣಾಧಿಕಾರಿ ನವೀನ್ ಕುಮಾರ್, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಜಿ.ನಾಗವೇಣಿ, ದೇವದಾಸಿ ಪುನರ್ವಸತಿ ಯೋಜನೆಯ ಯೋಜನಾಧಿಕಾರಿ ಗೋಪಾಲ್ ನಾಯಕ್, ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ, ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಮಹಿಳಾ ಅಭಿವೃದ್ಧಿ ಯೋಜನೆಯ ಫಲಾನುಭವಿಗಳು ಇದ್ದರು.