ಲೋಕದರ್ಶನ ವರದಿ
ಬಳ್ಳಾರಿ 07: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರದ ಹಂತದಲ್ಲಿ ನನೆಗುದಿಗೆ ಬಿದ್ದಿರುವ ಪ್ರಸ್ತಾವನೆಗಳ ಮಾಹಿತಿ ಒದಗಿಸಿ; ಅವುಗಳನ್ನು ಸರಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯರೂಪಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಎಸ್.ಶ್ರೀಕಾರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿದ್ದಪಡಿಸಲಾದ ವಿವಿಧ ಯೋಜನೆಗಳು ಮತ್ತು ಪ್ರಸ್ತಾವನೆಗಳನ್ನು ಸರಕಾರದ ಮಟ್ಟದಲ್ಲಿ ಕಾರ್ಯದರ್ಶಿಗಳೊಂದಿಗೆ ಚಚರ್ಿಸಿ ಅವುಗಳನ್ನು ಕಾರ್ಯರೂಪಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ ಅವರು ಜಿಲ್ಲಾಧಿಕಾರಿಗಳು,ಜಿಪಂ ಸಿಇಒ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಮೂಲಕ ಮಾಹಿತಿ ಪಡೆದುಕೊಂಡರು.
ವಸತಿ ಯೋಜನೆಗಳಲ್ಲಿನ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನೈಜಫಲಾನುಭವಿಗಳಿಗೆ ವಸತಿಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಈ ಸಮೀಕ್ಷಾ ಆ್ಯಪ್ ಸಹಕಾರಿಯಾಗಲಿದೆ ಎಂದರು.
ಪಿಡಿಒ,ಬಿಲ್ ಕಲೆಕ್ಟರ್ ಮತ್ತು ವಿಎಗಳ ವಿವರ ಈ ಆ್ಯಪ್ನಲ್ಲಿ ದಾಖಲಿಸಬೇಕು. ವಸತಿಗೆ ಸಂಬಂಧಿಸಿದ ಫೋಟೊ ತೆಗೆದು ಮಾಹಿತಿ ದಾಖಲಿಸಿದರೇ ಇಒ,ಜಿಪಂ ಸಿಇಒ, ತಹಸೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳ ಲಾಗಿನ್ಗೆ ಬರುತ್ತದೆ. ಒಕೆ ಆದರೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಂದರು.
37 ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ:
ಸ್ವಚ್ಛ ಭಾರತ ಮಿಶನ್ ಯೋಜನೆ ಅಡಿ 37 ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಮ ಸಂಸ್ಕರಣೆಗೆ ಕ್ರಮವಹಿಸಲಾಗಿದೆ. ಮೊದಲ ಹಂತದಲ್ಲಿ 22 ಗ್ರಾಪಂಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಎರಡನೇ ಹಂತದಲ್ಲಿ 15 ಗ್ರಾಪಂಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಜಿಪಂ ಸಿಇಒ ಕೆ.ನಿತೀಶ್ ಅವರು ಸಭೆಗೆ ವಿವರಿಸಿದರು.
ಕಸದ ತೊಟ್ಟಿ, ವಾಹನಗಳು,ಸಿವಿಲ್ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಇನ್ನೂ 15 ದಿನಗಳಲ್ಲಿ ಮೊದಲ ಹಂತದ ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣಾ ಕಾರ್ಯ ಆರಂಭವಾಗಲಿದೆ. ಈಗಾಗಲೇ ಈ ಕುರಿತು ಗ್ರಾಪಂಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದರು.
ನರೇಗಾದಡಿ ತೋಟಗಾರಿಕೆ ಇಲಾಖೆಯ ಪ್ರದೇಶದ ವಿಸ್ತರಣೆಗೆ ಒತ್ತು ನೀಡಲಾಗಿದೆ ಎಂದು ಅವರು ವಿವರಿಸಿದರು.
ಸಂಡೂರಿನ 23 ಗ್ರಾಪಂಗಳಲ್ಲಿ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ:
ಜಿಲ್ಲಾ ಖನಿಜ ಅಭಿವೃದ್ಧಿ ನಿಧಿ ಅಡಿ ಸಂಡೂರು ತಾಲೂಕಿನ 23 ಗ್ರಾಪಂಗಳ ವ್ಯಾಪ್ತಿಯ ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ ಎಂದು ಡಿಸಿ ನಕುಲ್ ಅವರು ಸಭೆಗೆ ವಿವರಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಕೆ.ನಿತೀಶ್, ಸಹಾಯಕ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್, ರಮೇಶ ಕೋನರೆಡ್ಡಿ, ಪ್ರಸನ್ನಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ ಸೇರಿದಂತೆ ತಹಸೀಲ್ದಾರರು, ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.