ಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
Bellary: District Collector Nagendra Prasad orders registration of hostels
ಲೋಕದರ್ಶನ ವರದಿ
ಬಳ್ಳಾರಿ 13: ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಸರ್ಕಾರೇತರ ಹಾಗೂ ಅನುದಾನಿತ ವಸತಿ ನಿಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚನೆ ನೀಡಿದ್ದಾರೆ.
‘06 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ಕಾರ್ಯವಿಧಾನಗಳ ಮಾರ್ಗಸೂಚಿಗಳು-2025’ ಅನ್ನು ಜಾರಿಗೆ ತರಲು ಸರ್ಕಾರ ಆದೇಶಿಸಿದೆ. ಈ ಪ್ರಕಟಣೆ ಹೊರಡಿಸಿದ ದಿನದಿಂದ 2 ತಿಂಗಳೊಳಗೆ ಎಲ್ಲಾ ವಸತಿ ನಿಲಯಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ವಸತಿ ನಿಲಯಗಳು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಬೇಕು. ಸರ್ಕಾರೇತರ ಮತ್ತು ಅನುದಾನಿತ ವಸತಿ ನಿಲಯಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಅರ್ಜಿ ಸಲ್ಲಿಸಬೇಕು. ಮಾರ್ಗಸೂಚಿ-2025 ರಲ್ಲಿ ನೀಡಲಾಗಿರುವ ‘ನಮೂನೆ-1' ರಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ನಗರದ ಕಂಟೋನ್‌ಮೆಂಟ್ ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ (ದೂ.08392-241373) ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 