ಲೋಕದರ್ಶನ ವರದಿ
ಬಳ್ಳಾರಿ 31: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.01 ಮತ್ತು 02 ರಂದು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ನಡೆಸಲಾಗುವುದು ಈ ಬಾರಿ ಸಮ್ಮೇಳನದ ಅಧ್ಯಕ್ಷತೆಯನ್ನು ಖ್ಯಾತ ಸಾಹಿತಿಗಳಾದ ಡಾ.ಜೆಎಂ ನಾಗಯ್ಯನವರು ವಹಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ತಿಳಿಸಿದ್ದಾರೆ.
ಫೆ.1 ರಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ, ಬೆಳ್ಳಿಗ್ಗೆ 9ಕ್ಕೆ ಪೊಲೀಸ್ ಇಲಾಖೆ, ಎಲ್ಲಾ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಎನ್.ಎಸ್.ಎಸ್.ಘಟಕಗಳು ಹಾಗೂ ಸಮಸ್ತ ಕನ್ನಡ ಪರ ಸಂಘಟನೆಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಕನ್ನಡಾಭಿಮಾನಿಗಳು, ಮುದ್ರಣ ಮತ್ತು ದೃಶ್ಯ ಮಾಧ್ಯಮ ಮಿತ್ರರೊಂದಿಗೆ ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ತಾಯಿ ಭುವನೇಶ್ವರಿಯ ಮೆರವಣಿಗೆಯು ಕನ್ನಡ ಸಾಂಸ್ಕೃತಿಕ ಸಮುಚ್ಛಯ ಆವರಣದಲ್ಲಿರುವ ಕನ್ನಡ ಭವನದಿಂದ ಹೊರಟು ಗಡಗಿ ಚನ್ನಪ್ಪ ವೃತ್ತ ಬೆಂಗಳೂರು ರಸ್ತೆ, ತೇರು ಬೀದಿ ಮೋತಿ ಸರ್ಕಲ್ ಮೂಲಕ ಸಮ್ಮೇಳನದ ಸಭಾಂಗಣ ತಲುಪುತ್ತದೆ.
ಬಳ್ಳಾರಿ ನಗರ ವಿಧಾನಸಭಾ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಮೆರವಣಿಗೆಯನ್ನು ಉದ್ಘಾಟನೆ ಮಾಡಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ 11.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಇದರ ಜೊತೆಗೆ ಪುಸ್ತಕ ಮಳಿಗೆಗಳ ಉದ್ಘಾಟನೆ, ಚಿತ್ರಕಲಾ ಪ್ರದರ್ಶನ ಉದ್ಘಾಟನೆ ಹಾಗೂ ವಿವಿಧ ಲೇಖಕರ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮಗಳು ನಡೆಯಲಿವೆ ಹಾಗೂ ಮಧ್ಯಾಹ್ನ 1 ಗಂಟೆಗೆ ಸಮಕಾಲೀನ ಸಾಹಿತ್ಯದ ನಿಲುವುಗಳು ವಿಷಯದ ಕುರಿತಾದ ಮೊದಲ ಗೋಷ್ಠಿ, 2.30ರಿಂದ ಬಳ್ಳಾರಿ ಜಿಲ್ಲೆಯ ಸಾಂಸ್ಕೃತಿಕ ಆಸ್ಮಿತೆ ವಿಷಯದ ಕುರಿತಾದ ಎರಡನೇ ಗೋಷ್ಠಿ, 4.15ಕ್ಕೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ 6ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.02ರ ಸಮ್ಮೇಳನದ ಎರಡನೇ ದಿನದಂದು ಬೆಳಿಗ್ಗೆ 10ಗಂಟೆಗೆ ವಿದ್ಯಾಥರ್ಿ ಕವಿಗೋಷ್ಠಿ ಹಾಗೂ 2018-19ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ವಿದ್ಯಾಥರ್ಿಗಳಿಗೆ ಕನ್ನಡ ಜಾಣ-ಜಾಣಿ ಪುರಸ್ಕಾರ ಸನ್ಮಾನ ಕಾರ್ಯಕ್ರಮ, 11.30ರಿಂದ ಕೃಷಿ ಮತ್ತು ಕೈಗಾರಿಕೆ ವಿಷಯ ಕುರಿತಾದ 4ನೇ ಗೋಷ್ಠಿ, ಮಧ್ಯಾಹ್ನ 1ಗಂಟೆಗೆ ಕವಿಗೋಷ್ಠಿ, 3ಗಂಟೆಗೆ ಸಮ್ಮೇಳನಾಧ್ಯಕ್ಷರಾದ ಡಾ.ಜೆ.ಎಂ.ನಾಗಯ್ಯನವರೊಂದಿಗೆ ಸಂವಾದ ಕಾರ್ಯಕ್ರಮ, 4ಗಂಟೆಗೆ ಬಹಿರಂಗ ಅಧಿವೇಶನ, 4.30ಕ್ಕೆ ಬಳ್ಳಾರಿಯ ಎಲ್ಲಾ ಪತ್ರಕರ್ತ ಹಾಗೂ ವಿದ್ಯುನ್ಮಾನ ಮಾದ್ಯಮ ಮಿತ್ರರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸನ್ಮಾನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಸಂಜೆ 6.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ