ಬಳ್ಳಾರಿ: ಜಿಲ್ಲಾಡಳಿತದಿಂದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಸರಳ ಆಚರಣೆ
Bellary: District administration celebrates Hemareddy Mallamma Jayanti in a simple manner
ಬಳ್ಳಾರಿ 11: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ’ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ’ಯನ್ನು ಭಾನುವಾರ ಅತ್ಯಂತ ಸರಳವಾಗಿ ಆಚರಿಸಲಾಯಿತು.ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶೋಕ ಆಚರಿಸಲಾಗುತ್ತಿದ್ದು, ಸಚಿವರ ನಿಧನಕ್ಕೆ ಗೌರವ ಸೂಚಿಸುವ ಸಲುವಾಗಿ ಕೇವಲ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಎರಡು ನಿಮಿಷಗಳ ಕಾಲ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಹಾಗೂ ಇಲಾಖೆಯ ಸಿಬ್ಬಂದಿ ವರ್ಗ ಇದ್ದರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 