ಬಳ್ಳಾರಿ: ಸರ್ಕಾರಿ ಜಮೀನು ಒತ್ತುವರಿ ವಿರುದ್ಧ ಜಿಲ್ಲಾಡಳಿತ ಸಮರಅಂದ್ರಾಳ್ ಬೈಪಾಸ್ ಬಳಿ ತೆರವು ಕಾರ್ಯಾಚರಣೆ
Bellary: District administration conducts clearance operation near Samarandral Bypass against encroa
ಬಳ್ಳಾರಿ 22: ಜಿಲ್ಲಾಡಳಿತವು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಬುಧವಾರ ಅಂದ್ರಾಳ್ ಬೈಪಾಸ್ ರಸ್ತೆಯ ಸಮೀಪ ಕಾರ್ಯಾಚರಣೆ ನಡೆಸಿತು.ಅಂದ್ರಾಳ್ ಗ್ರಾಮದ ಸರ್ವೇ ನಂಬರ್ ಒಂದರಲ್ಲಿ ಸುಮಾರು 3 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಸಿಮೆಂಟ್ ಕಟ್ಟಡಗಳು ಮತ್ತು ಇತರ ನಿರ್ಮಾಣಗಳನ್ನು ಜಿಲ್ಲಾಡಳಿತವು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವುಗೊಳಿಸಿದೆ.
ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅವರು ಮಾತನಾಡಿ, ಜಿಲ್ಲಾಡಳಿತದ ಈ ದಿಟ್ಟ ಕ್ರಮವು ಸರ್ಕಾರಿ ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಈ ಒತ್ತುವರಿಯ ಹಿಂದೆ ಯಾರೇ ಇದ್ದರೂ ಮತ್ತು ಯಾರು ಪ್ರಚೋದನೆ ನೀಡುತ್ತಿದ್ದರೂ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಡಿಡಿಎಲ್‌ಆರ್ ಪ್ರಮೋದ್ ಸೇರಿದಂತೆ ಬಳ್ಳಾರಿ ತಾಲ್ಲೂಕು ತಹಸೀಲ್ದಾರ ಕಚೇರಿಯ ಅಧಿಕಾರಿ- ಸಿಬ್ಬಂದಿ ಹಾಗೂ ಮತ್ತೀತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 