ಬಳ್ಳಾರಿ: ತೇಜಸ್ವಿನಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ

ಬಳ್ಳಾರಿ 22: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಹೊನ್ನೂರಮ್ಮ ದಿ.ಸಿದ್ದಪ್ಪ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತೇಜಸ್ವಿನಿ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಘೋಷಿಸಿದೆ. 

ತೇಜಸ್ವಿನಿಯವರು ಮೈಸೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಪ್ರಾಧ್ಯಾಪಕರಾದ ಡಾ.ಎನ್.ಕೆ.ಗಾಯತ್ರಿ ಅವರ ಮಾರ್ಗದರ್ಶನದಲ್ಲಿ "ಎ ಸ್ಟಡೀ ಆನ್ ಟೂರಿಸಂ ಡೆವಲಪ್ಮೆಂಟ್ ಪ್ರೋಗ್ರಾಮ್ಸ್ ಇನ್ ಕನರ್ಾಟಕ" ಎಂಬ ಶೀರ್ಷಿಕೆ ಅಡಿಯಲ್ಲಿ ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ. ತೇಜಸ್ವಿನಿಯವರನ್ನು ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.