ಬಳ್ಳಾರಿ: ಉತ್ಸವ ವೀಕ್ಷಣೆಗೆ ಉಚಿತ ಬಸ್ ವ್ಯವಸ್ಥೆಗೆ

ಬಳ್ಳಾರಿ: ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಂಪಿ ಉತ್ಸವ ವೀಕ್ಷಿಸಲಿ ಎಂಬ ಸದುದ್ದೇಶದಿಂದ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಹೊಸಪೇಟೆಯಿಂದ ಹಂಪಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು. 

ಜನರಿಗಾಗಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದ ಜಿಲ್ಲಾಡಳಿತದ ಕ್ರಮಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮೋತಿಲಾಲ್ ಲಮಾಣಿ ಮತ್ತಿತರರು ಇದ್ದರು.