ಬಳ್ಳಾರಿ: ವಿಶ್ವಕ್ಕೆ ಆಹಿಂಸಾ ಮಾರ್ಗದ ಮಹತ್ವ ಸಾರಿದ ಗಾಂಧೀಜಿ

ಬಳ್ಳಾರಿ 02: ಹಿಂಸೆ ಮತ್ತು ಸೇಡಿನ ಮಾರ್ಗಗಳಿಗಿಂತ ಆಹಿಂಸಾ ಮಾರ್ಗ ಅತ್ಯಂತ ಪರಿಣಾಮಕಾರಿಯಾದುದು ಎಂದು ವಿಶ್ವಕ್ಕೆ ಸಾರಿದವರು ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಎಂದು ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ ಬಣ್ಣಿಸಿದರು.

ಜಿಲ್ಲಾಡಳಿತ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮವರ್ಷಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಕೊಡುಗೆ ದೊಡ್ಡದಿದ್ದು, ಅವರು ನಡೆಸಿದ ಆಹಿಂಸಾ ಚಳವಳಿ ಮಾರ್ಗಗಳು ಇಂದಿಗೂ ಪ್ರಸ್ತುತ ಎಂದರು.

ಹಳ್ಳಿಗಳೇ ದೇಶದ ಜೀವಾಳವೆನಿಸಿಕೊಂಡಿದ್ದ ಗಾಂಧೀಜಿಯವರು ಹಳ್ಳಿಗಳು ಮೊದಲು ಅಭಿವೃದ್ಧಿಯಾಗಬೇಕೆಂದು ಕನಸು ಕಂಡಿದ್ದರು. ಅಭಿವೃದ್ಧಿ ಎಂದರೇ ಕೇವಲ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲ;

ಅಲ್ಲಿನ ಶೈಕ್ಷಣಿಕವಾಗಿ,ಆರೋಗ್ಯ ಮತ್ತು ಅಥರ್ಿಕವಾಗಿ ಜನರ ಜೀವನಮಟ್ಟ ಸುಧಾರಣೆಯಾದಾಗ ಮಾತ್ರ ಹಳ್ಳಿ ಅಭಿವೃದ್ಧಿಯಾದಂತೆ ಎಂದಿದ್ದರು ಎಂದು ಅವರು ವಿವರಿಸಿದರು.

ಮಹಾತ್ಮ ಗಾಂಧೀಜಿ ಅವರ ಜಯಂತಿ ನಿಮಿತ್ತ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ "ಮಹಾತ್ಮ ಗಾಂಧೀಜಿ 150"ಸಾಕ್ಷ್ಯಚಿತ್ರಗಳನ್ನು ಪ್ರದಶರ್ಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ತಹಸೀಲ್ದಾರ್ ವಿಶ್ವಜೀತ್ ಮೆಹತಾ, ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬಿ.ಕೆ.ರಾಮಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಸುರೇಶಬಾಬು, ಸಹಕಾರ ಸಂಘಗಳ ಉಪನಿಬಂಧಕಿ ಡಾ.ಸುನೀತಾ ಸಿದ್ರಾಮ್, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಶುಭಾ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ವಾಗೀಶ ಶಿವಾಚಾರ್ಯ, ಅಬಕಾರಿ ಇಲಾಖೆಯ ವಿನೋದ ಡಾಂಗೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕ ನಾಗರಾಜಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಮಿತ್ ಬಿದರಿ, ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ನೌಕರರು,ಸಾರ್ವಜನಿಕರು ಇದ್ದರು.

ಕಪಗಲ್ಲುವಿನಲ್ಲಿ ಸ್ವಚ್ಛತಾ ಶ್ರಮದಾನ: 

ಮಹಾತ್ಮ ಗಾಂಧೀಜಿ ಜಯಂತಿ ನಿಮಿತ್ತ ಜಿಲ್ಲಾಡಳಿತ, ಜಿಪಂ ಹಾಗೂ ಕಪಗಲ್ಲು ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಶ್ರಮದಾನ ಮಾಡಿದರು