ಬಳ್ಳಾರಿ: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಕರೆ ಮಾಡಿ
Bellary: If you are not included in the Social and Educational Survey of Backward Classes, call the
ಬಳ್ಳಾರಿ: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಕರೆ ಮಾಡಿ
ಬಳ್ಳಾರಿ 08:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆ ಸಮೀಕ್ಷೆಗೆ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆ: 8277888866 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡುವರು. ಸಾರ್ವಜನಿಕರು ಈ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಂಪ್ಲಿ: ಮೂರು ದಿನಗಳ ಕೃಷಿ ತರಬೇತಿಗೆ ನೋಂದಾಯಿಸಿಕೊಳ್ಳಲು ಆಹ್ವಾನಬಳ್ಳಾರಿ 08: ಕಂಪ್ಲಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ವತಿಯಿಂದ ಸಾವಯವ ಕೃಷಿ, ನೈಸರ್ಗಿಕ ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆ ಕುರಿತು ಅ.16 ರಿಂದ ಅ.18 ರವರೆಗೆ ಮೂರು ದಿನಗಳ ವಿಶೇಷ ಸಾಂಸ್ಥಿಕ ತರಬೇತಿ ಕಾರ್ಯಕ್ರಮವನ್ನು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ರೈತರು, ಮಹಿಳಾ ರೈತರು ನೋಂದಾಯಿಸಿಕೊಳ್ಳಬಹುದು.
ತರಬೇತಿಗೆ ಭಾಗವಹಿಸುವ ರೈತರಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಇದ್ದು, ಆಸಕ್ತಿಯುಳ್ಳ ರೈತರು ಜಮೀನಿನ ಎಫ್.ಐ.ಡಿ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಳ್ಳಬಹುದು.ಹೆಸರನ್ನು ನೊಂದಾಯಿಸಿಕೊಳ್ಳಲು ಇಚ್ಛಿಸುವವರು ಕೃಷಿ ಅಧಿಕಾರಿ ಯೇಸುಬಾಬು-ಮೊ.6360645255 ಮತ್ತು ಸಹಾಯಕ ಕೃಷಿ ನಿರ್ದೇಶಕಿ ವಿದ್ಯಾವತಿ ಹೊಸಮನಿ-ಮೊ.7353533138 ಗೆ ಸಂಪರ್ಕಿಸಬಹುದು ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 