ಬಳ್ಳಾರಿ: ರಸ್ತೆ ಸುರಕ್ಷತಾ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸಿ: ಡಿಸಿ ರಾಮ ಪ್ರಸಾತ್

ಬಳ್ಳಾರಿ 16: ಜಿಲ್ಲೆಯಲ್ಲಿ ರಸ್ತೆ ಅಪಘಾತ ಮತ್ತು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಸಮಗ್ರ ರಸ್ತೆ ಸುರಕ್ಷತಾ ಕ್ರಿಯಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸ್ತೆ ಅಪಘಾತ ಮತ್ತು ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಚಾಲನಾ ಪರವಾನಿಗೆಯನ್ನು ನೀಡುವಾಗ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಿ, ಸಂಬಂಧಪಟ್ಟವರಿಗೆ ಚಾಲನಾ ಪರವಾನಿಗೆ ನೀಡಿ ಮತ್ತು ಪರವಾನಿಗೆ ನೀಡಿಕೆಯಲ್ಲಿ ಮಧ್ಯವತರ್ಿಗಳ ಹಾವಳಿ ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

      ಸರಕು ಸಾಗಾಣಿಕೆ ವಾಹನದಲ್ಲಿ ಸಾರ್ವಜನಿಕರನ್ನು ಕರೆದೊಯ್ಯುವ ಚಾಲಕರು/ಮಾಲೀಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಅವರು,ಅವಧಿ ಮುಗಿದ ವಾಹನಗಳ ಸಂಚಾರ ನಿರ್ಬಂಧಗೊಳಿಸಿ ಎಂದರು.

    ಚಾಲನಾ ತರಬೇತಿ ಶಾಲೆಗಳಲ್ಲಿ ತರಬೇತಿದಾರರ ಸಾಮಥ್ರ್ಯದ ಪರಿಶೀಲನೆ ನಡೆಸಿ, ಶಾಲಾ/ಕಾಲೇಜು ಬಸ್, ಆಟೋ,ಇತರೆ ವಾಹನಗಳನ್ನು ತಿಂಗಳಿಗೊಮ್ಮೆ ಚಾಲಕ/ಶಾಲಾ ಮುಖ್ಯಸ್ಥರನ್ನು ಭೇಟಿ ಮಾಡಿ, ವಾಹನದ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು ಎಂದು ಅವರು ಹೇಳಿದರು.

ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ತಿಳಿಸಿದ ಡಿಸಿ ರಾಮ್ ಪ್ರಸಾತ್ ಅವರು, ರಸ್ತೆ ಅಗಲೀಕರಣ, ರಿಂಗ್ ರೋಡ್ ನಿರ್ಮಾಣದ  ಅವಶ್ಯಕತೆ ಸೇರಿದಂತೆ ವಿವಿಧ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘವಾದ ಚರ್ಚೆಗಳು  ನಡೆಯಿತು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿದರು. ಆರ್ಟಿಒ ಶ್ರೀಧರ್ ಮಲ್ನಾಡ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸಭೆಯ ಉದ್ದೇಶಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.