ಲೋಕದರ್ಶನ ವರದಿ
ಬಳ್ಳಾರಿ 05: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಬಗೆಹರಿಸಿಕೊಳ್ಳಲು ಹಾಗೂ ವ್ಯಾಜ್ಯ ಪೂರ್ವ ದಾವಾ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯಥರ್ಿಗೊಳಿಸಲು ಇದೇ ಜುಲೈ 13ರಂದು ಲೋಕ ಅದಾಲತ್ನ್ನು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಪಯರ್ಾಯ ವ್ಯಾಜ್ಯಗಳ ಪರಿಹಾರ ಕೇಂದ್ರದಲ್ಲಿ ನಡೆಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ಬಿರಾದಾರ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಪಯರ್ಾಯ ವ್ಯಾಜ್ಯಗಳ ಪರಿಹಾರ ಕೇಂದ್ರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸೆಕ್ಷನ್ 138ರ ಅಡಿಯ ಎನ್ಐ ಕೇಸು, ಬ್ಯಾಂಕ್ ಸಾಲ, ಚೆಕ್ ಬೌನ್ಸ್ ಪ್ರಕರಣಗಳು, ಕಾಮರ್ಿಕರ, ನಾಗರಿಕರ ವಿವಾದಗಳು, ವಿದ್ಯುತ್ ಹಾಗೂ ನೀರಿನ ಬಿಲ್ಲುಗಳ ವಿವಾದ, ವೈವಾಹಿಕ, ಗುಂಪು ಘರ್ಷಣೆ, ದೌರ್ಜನ್ಯಕ್ಕೆ ಬಲಿಯಾದವರು, ಮಹಿಳೆಯರು, ಮಕ್ಕಳು ಹಾಗೂ ವಿವಿಧ ಕ್ರಿಮಿನಲ್ ಕೇಸುಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಈ ಲೋಕ ಅದಾಲತ್ನ ಉದ್ದೇಶವಾಗಿದೆ ಎಂದರು.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯಾರ್ಥಗೊಳಿಸಲು ಸುವರ್ಣ ಅವಕಾಶ ಕಲ್ಪಿಸಿದೆ ಎಂದು ಹೇಳಿದ ನ್ಯಾ.ಬಿರಾದಾರ್ ಅವರು ವಕೀಲರ ಮುಖಾಂತರವಾಗಲೀ ಅಥವಾ ತಾವೇ ನೇರವಾಗಿ ಭಾಗವಹಿಸಬಹುದು. ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಇಬ್ಬರು ಒಪ್ಪಿಗೆಯಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದ ತೀರ್ಮಾನವಾಗುತ್ತದೆ ಸಂಧಾನಕಾರರು ಸೂಚಿಸಿರುವ ಪರಿಹಾರ ನಿಮಗೆ ತೃಪ್ತಿಯಾದಲ್ಲಿ ಮಾತ್ರ ರಾಜೀ ಅವಕಾಶ ಮಾಡಿಕೊಳ್ಳಬಹುದು. ಕಡಿಮೆ ಖಚರ್ಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಅಜರ್ುನ್ ಎಸ್.ಮಲ್ಲೂರ್ ಮಾತನಾಡಿ, 42,474 ಕೇಸುಗಳು ಜಿಲ್ಲಾ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದ್ದು ಅದರಲ್ಲಿ 19,354 ಕೇಸುಗಳು ವಿವಿಧ ಸ್ವರೂಪವನ್ನು ಪಡೆದುಕೊಂಡಿವೆ. ಇನ್ನುಳಿದಂತೆ 23,120 ವಿವಿಧ ಕ್ರಿಮಿನಲ್ ಕೇಸುಗಳು ಚಾಲ್ತಿಯಲ್ಲಿದ್ದು 5,166 ಬಾಕಿ ಇರುವ ಬ್ಯಾಂಕ್, ವೈಯುಕ್ತಿಕ, ಸಣ್ಣ ಕೈಗಾರಿಕೆಗಳಲ್ಲಿ ಪಡೆದಿರುವ ಸಾಲಗಳನ್ನು ಗುರುತಿಸಿ ಈ ಲೋಕ ಅದಾಲತ್ನಲ್ಲಿ ಇತ್ಯರ್ಥಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.