ಬಳ್ಳಾರಿ: ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ: ಮದ್ಯದಂಗಡಿಗಳು ಮುಚ್ಚಲು ಸೂಚನೆ

ಬಳ್ಳಾರಿ 06: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವವು ಫೆ.08 ರಿಂದ ಫೆ.13ರವರೆಗೆ ನಡೆಯಲಿದ್ದು ಈ ಆಚರಣೆಯನ್ನು ಶಾಂತಿಯುತವಾಗಿ ನಡೆಯುವ ಸಲುವಾಗಿ ಮದ್ಯದಂಗಡಿಗಳನ್ನು ತೆರೆಯದಂತೆ ನಿಷೇಧಿಸಿ ಆದೇಶಿಸಲಾಗಿದೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ. 

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರನ್ವಯ ಪ್ರದತ್ತವಾದ ಅಧಿಕಾರಿಯನ್ನು ಚಲಾಯಿಸಿ ಫೆ.8 ರ ಬೆಳಿಗ್ಗೆ 6 ರಿಂದ ಫೆ.13ರ ಬೆಳಿಗ್ಗೆ 6 ಗಂಟೆಯವರೆಗೆ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ಪ್ರಯುಕ್ತ ಮದ್ಯದಂಗಡಿ ತೆರೆಯದೆ ನಿಷೇಧಿಸಲಾಗಿದೆ. 

ಈ ಆಚರಣೆಯನ್ನು ಶಾಂತ ರೀತಿಯಿಂದ ನಡೆಯುವ ಸಲುವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪರಿಣಾಮಕಾರಿಯಾಗಿ ನೆರವೇರಿಸಲು ಮೈಲಾರ ಹಾಗೂ ಹೊಳಲು ಗ್ರಾಮಗಳನ್ನೊಳಗೊಂಡತೆ ಹೊಳಲು ಹೊಬಳಿ 10 ಕಿ.ಮೀ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ನಿಷೇಧಿಸಲಾಗಿದೆ ಎಂದು ಆದೇಶಲ್ಲಿ ತಿಳಿಸಿದ್ದಾರೆ.