ಬಳ್ಳಾರಿ: ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧಾರಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ ನಿರ್ಧಾರ
Bellary: Meaningful celebration of the birth anniversary of the decision-makers at the preparatory m
ಬಳ್ಳಾರಿ 09: ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು.
ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು, ಸಮುದಾಯದ ಮುಖಂಡರೊಂದಿಗೆ ಶುಕ್ರವಾರ ಏರಿ್ಡಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಜ.19 ರಂದು ಮಹಾಯೋಗಿ ವೇಮನ ಜಯಂತಿ, ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ಹಾಗೂ ಜ.25 ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು.
ಶಿವಶರಣರು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾದವರಲ್ಲ; ಮಹನೀಯರ ಜೀವನ, ಅವರ ಚಿಂತನೆ, ದಾರ್ಶನಿಕ ಬದುಕುಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದ್ದು, ಸರ್ಕಾರವು ಜಯಂತಿ ಕಾರ್ಯಕ್ರಮ ಆಚರಿಸಲು ನಿರ್ದೇಶನವಿದೆ ಎಂದು ತಿಳಿಸಿದರು.ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಡಿಜೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ-ಸಂಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು.ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದರು.
ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯವನ್ನು ನಿರ್ವಹಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ, ಸರ್ಕಾರದ ಆದೇಶದಂತೆ ಸಭೆ ಸಮಾರಂಭಗಳಲ್ಲಿ ಪುಸ್ತಕ ನೀಡಲು ಮಾತ್ರ ಅವಕಾಶವಿದ್ದು, ಬೇರೆ ಯಾವುದೇ ತರದ ಹೂಗುಚ್ಛ, ಫಲಬುಟ್ಟಿ ಇನ್ನಿತರೆ ವಸ್ತುಗಳು ನೀಡುವಂತಿಲ್ಲ ಎಂದು ತಿಳಿಸಿದರು.ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಡಿಡಿಪಿಯು, ತೋಟಗಾರಿಕೆ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 