ಬಳ್ಳಾರಿ: ಘನತ್ಯಾಜ್ಯ ನಿರ್ವಹಣೆ ಅನುಷ್ಠಾನ ಕ್ರಮಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

ಲೋಕದರ್ಶನ ವರದಿ

ಬಳ್ಳಾರಿ 29: ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಪಂ ಸ್ವಚ್ಛಭಾರತ ಮಿಶನ್ ಯೋಜನೆ ಅಡಿ ಜಿಲ್ಲೆಯ 80 ಗ್ರಾಪಂಗಳಿಗೆ ಘನತ್ಯಾಜ್ಯ ಸಂಗ್ರಹಣಾ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ ಘನತ್ಯಾಜ್ಯ ಸಂಗ್ರಹಣಾ ಮತ್ತು ವಿಲೇವಾರಿಯಲ್ಲಿ ಇಡೀ ರಾಜ್ಯದಲ್ಲಿಯೇ ಬಳ್ಳಾರಿ ಪ್ರಥಮಸ್ಥಾನದಲ್ಲಿರುವುದು ಅತ್ಯಂತ ಸಂತಸ ತಂದಿದೆ. ಇದಕ್ಕೆ ಕಾರಣೀಕರ್ತರಾದ ಎಲ್ಲರು ಅಭಿನಂದನಾರ್ಹರು ಎಂದರು.

ಬಳ್ಳಾರಿ ಜಿಲ್ಲೆಯ ಒಟ್ಟು 237 ಗ್ರಾಮ ಪಂಚಾಯತಿಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಕುರಿತು ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಕ್ರಮವಹಿಸಲಾಗಿದೆ, ಈಗಾಗಲೇ 146 ಗ್ರಾಮ ಪಂಚಾಯತಿಗಳಲ್ಲಿ

ಸ್ಥಳವನ್ನು ಗುರುತಿಸಿ ವಿಸ್ತ್ರತ ಯೋಜನಾ ವರದಿ ತಯಾರಿಸಲು ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಗೆ

ತರಬೇತಿ ನೀಡಲಾಗಿದೆ. ಪ್ರಸ್ತುತ 100 ಗ್ರಾಮ ಪಂಚಾಯತಿಗಳಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ 98 ಗ್ರಾಮ ಪಂಚಾಯತಿಗಳಿಗೆ ಸಕರ್ಾರದಿಂದ ಅನುಮೋದನೆ ಪಡೆಯಲಾಗಿದ್ದು, ಅವುಗಳಲ್ಲಿ ಮೊದಲನೇ

ಹಂತದಲ್ಲಿ ಅನುಮೋದನೆ ಪಡೆದ 16 ಗ್ರಾಮ ಪಂಚಾಯತಿಗೆ ವಾಹನಗಳನ್ನು ಖರೀದಿಸಲಾಗಿದ್ದು,ಎರಡನೇ ಹಂತದಲ್ಲಿ 80 ಗ್ರಾಮ ಪಂಚಾಯತಿಗಳಿಗೆ ವಾಹನಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳಿಗೆ ವಿತರಿಸಲಾಗುತ್ತಿದೆ ಎಂದರು.

ಸ್ವಚ್ಛ-ಸ್ವಸ್ಥ ಗ್ರಾಮಗಳನ್ನು ರೂಪಿಸಿ ಸದೃಢ ಸಮಾಜ ರೂಪಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಒಟ್ಟು ರೂ.20ಲಕ್ಷಗಳವರಗೆ ಪ್ರತಿ ಗ್ರಾಮ ಪಂಚಾಯತಿಗೆ ಸಕರ್ಾರದಿಂದ ನೀಡಲಾಗುತ್ತಿದ್ದು, ಅದರಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ನಿಮರ್ಾಣಕ್ಕೆ, ಸಂಗ್ರಹಣ ವಾಹನ ಖರೀದಿಗೆ, ಮನೆ ಮನೆ ಕಸ ಬುಟ್ಟಿ ವಿತರಣೆಗೆ, ಹಾಗೂ ಕಸ ಸಂಗ್ರಹಕರಿಗೆ ವಿವಿಧ ರೀತಿಯ ಸುರಕ್ಷಿತ ಪರಿಕರಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ಬಳಸಿಕೊಳ್ಳಲಾಗುತ್ತಿದೆ ಎಂದರು. 

ನಮ್ಮ ನಡೆ-ಹಳ್ಳಿ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಲಾಗುತ್ತಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಡಗೂಡಿ ಹಳ್ಳಿಕಡೆ ಸಾಗುವ ಹಾಗೂ ನೈರ್ಮಲ್ಯ,ಆರೋಗ್ಯ,ಕುಂದುಕೊರತೆ ಸೇರಿದಂತೆ ಇನ್ನೀತರ ದೂರು-ದುಮ್ಮಾನಗಳನ್ನು ಆಲಿಸಿ ಪರಿಹರಿಸಲಾಗುವುದು. ತಾವೇ ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಬೇಕು ಎಂದು ಸಚಿವರಲ್ಲಿ ಕೇಳಿಕೊಂಡರು.

ಆಯುಷ್ಮಾನ್ ಭಾರತ್-ಆರೋಗ್ಯ ಕಾಡರ್್ ನೋಂದಣಿಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಬಳ್ಳಾರಿ ಪಡೆದಿದ್ದು,ಇದಕ್ಕೆ ಕಾರಣಿಕರ್ತರಾದವರಲ್ಲಿ ಐವರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ,ಉಪಾಧ್ಯಕ್ಷೆ ದೀನಾ ಮಂಜುನಾಥ, ಜಿಪಂ ಸಿಇಒ ನಿತೀಶ್, ಜಿಪಂ ಸದಸ್ಯರಾದ ಅಲ್ಲಂಪ್ರಶಾಂತ, ಮಾನಯ್ಯ,ಸೌಭಾಗ್ಯ,ಜಿಪಂ ಉಪಕಾರ್ಯದಶರ್ಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.