ಬಳ್ಳಾರಿ: ಜಿಲ್ಲಾಧಿಕಾರಿಯಾಗಿ ನಕುಲ್ ಅಧಿಕಾರ ಸ್ವೀಕಾರ

ಲೋಕದರ್ಶನ ವರದಿ
ಬಳ್ಳಾರಿ 19: ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ನಕುಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಗಳಾದ ಜಿಪಂ ಸಿಇಒ ಕೆ.ನಿತೀಶ್ ಅವರು ಅಧಿಕಾರ ಹಸ್ತಾಂತರಿಸಿದರು.
    ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಅವರ ಜಾಗಕ್ಕೆ ಎಸ್.ಎಸ್.ನಕುಲ್ ಅವರನ್ನು ನೇಮಿಸಿತ್ತು. 
     ಈ ಮುಂಚೆ ನಕುಲ್ ಅವರು ಬಳ್ಳಾರಿ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬಳ್ಳಾರಿ ಜಿಲ್ಲಾಧಿಕಾರಿಯಾಗಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭಾಷಯ ಕೋರಿದರು. ನಂತರ ಅವರು ಅಧಿಕಾರಿಗಳ ಸಭೆ ನಡೆಸಿ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.