ಲೋಕದರ್ಶನ ವರದಿ
ಬಳ್ಳಾರಿ 30: ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ದನ್ ಯೋಜನೆ ಹಾಗೂ ವ್ಯಾಪಾರಿಗಳು ಮತ್ತು ಸ್ವ ಉದ್ಯೋಗಿಗಳಿಗಾಗಿ ರಾಷ್ಟ್ರೀಯ ಪಿಂಚಣಿ ಯೋಜನೆಗಳು ಜನಹಿತವಾಗಿದ್ದು ಎಲ್ಲಾ ಇಲಾಖೆಗಳು ನಿರ್ದಿಷ್ಠ ಗುರಿಯನ್ನು ತಲುಪುವುದರ ಜೊತೆಗೆ ತಿಂಗಳಿಗೆ ಎರಡು ಬಾರಿ ಅನುಷ್ಠಾನದ ಪ್ರಗತಿ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕೆಂದು ಅಪರ ಜಿಲ್ಲಾಧಿಕಾರಿ ಮಂಜುನಾಥ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪಿಎಂ-ಎಸ್ವೈಎಂ, ಎನ್ ಪಿಎಸ್ ಗೆ ಸಂಬಂಧಿಸಿದ ಜಿಲ್ಲಾ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ಭಾರತೀಯ ಜೀವ ವಿಮಾ ನಿಗಮ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಹಾಗೂ ದೇಶದ ಅಸಂಘಟಿತ ವಲಯ ಕಾಮರ್ಿಕರಿಗೆ ಪಿಂಚಣಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತಾದ ಇಲಾಖಾವಾರು ಅಧಿಕಾರಿಗಳ ಜೊತೆ ಚಚರ್ಿಸಿದರು.
42 ಕೋಟಿ ಅಸಂಘಟಿತ ಕಾರ್ಮಿಕರ ನಿವೃತ್ತಿ ಜೀವನ ಸುಗಮಗೊಳಿಸುವ ಸಲುವಾಗಿ 2019 ಫೆ.7 ಜಾರಿಗೆ ತರಲಾದ ಪಿಂಚಣಿ ಯೋಜನೆಯನ್ನು ಆರು ತಿಂಗಳ ಹಿಂದೆ ಬಳ್ಳಾರಿಯಲ್ಲಿ ಚಾಲನೆ ನೀಡಲಾಗಿದೆ. ಹಂಪಿ ಉತ್ಸವ ಸಂದರ್ಭದಲ್ಲೂ ಯೋಜನೆ ಕುರಿತಾಗಿ ಜಿಲ್ಲಾಡಳಿತವು ಮಳಿಗೆ ಮೂಲಕ ಮಾಹಿತಿಯನ್ನು ನೀಡಲಾಗಿತ್ತು ಎಂದು ವಿವರಿಸಿದ ಅವರು ಮಾ.31ರೊಳಗೆ ಜಿಲ್ಲೆಯಲ್ಲಿ ಒಟ್ಟು 51 ಸಾವಿರ ಫಲಾನುಭವಿಗಳಿಗೆ ಪಿಂಚಣಿ ಯೋಜನೆ ಸೌಲಭ್ಯ ಒದಗಿಸುವ ಗುರಿ ಹೊಂದಲಾಗಿದೆ ಎಂದರು.
ಕಾಮರ್ಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ತಾಪಂ, ಜಿಪಂ, ಕೃಷಿ ಮಾರುಕಟ್ಟೆ ಸಮಿತಿ, ಹಾಲು ಉತ್ಪಾದಕರ ಸಂಘ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.
ಸಂವಾದಕ್ಕೂ ಮುನ್ನ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಆಚರಿಸಲಾಗುವ ಹುತಾತ್ಮ ದಿನದ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಮೌನಾಚರಣೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಚಂದ್ರಶೇಖರ ಎನ್. ಐಲಿ, ಕಾರ್ಮಿಕ ನಿರೀಕ್ಷಕರು ಎಮ್.ರವಿದಾಸ್, ಸಿ.ಎನ್.ರಾಜೇಶ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು, ಕಾಮರ್ಿಕ ಸಂಘಟನಾ ಕಾರ್ಯದರ್ಶಿಗಳು, ವ್ಯಾಪಾರಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.