ಬಳ್ಳಾರಿ: ಸಚಿವ ಮಾಧುಸ್ವಾಮಿ ವಿರುದ್ಧ ಪ್ರತಿಭಟನೆ
ಲೋಕದರ್ಶನ ವರದಿ
ಬಳ್ಳಾರಿ 22: ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ ಏಕವಚನದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ನಿಂದಿಸಿದ್ದಾರೆ ಎಂದು ಆರೋಪಿಸಿ, ಕುರುಬ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು.
ಹುಳಿಯಾರು ಪಟ್ಟಣದ ಕನಕವೃತ್ತ ತೆರವು ವಿಚಾರದಲ್ಲಿ ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ ಏಕವಚನದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ನಿಂದಿಸಿದ್ದಾರೆ ಎಂದು ಆರೋಪಿಸಿ ನಗರದಲ್ಲಿಂದು ಕುರುಬ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದ್ರು.ಸಚಿವ ಮಾಧುಸ್ವಾಮಿ ವಿರುದ್ಧ ಬಳ್ಳಾರಿಯಲ್ಲಿ ಕುರುಬ ಸಮುದಾಯದ ಪ್ರತಿಭಟನೆಗಡಗಿ ಚನ್ನಪ್ಪ ವೃತ್ತದ ಬಳಿ ಎಂ.ಜಿ.ಕನಕ ನೇತೃತ್ವದಲ್ಲಿ ಹತ್ತಾರು ಕುರುಬ ಸಮುದಾಯದ ಯುವಕರು ಜಮಾಯಿಸಿ ಕೆಲಕಾಲ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಕೂಡಲೇ ಸಚಿವರು ಈಶ್ವರಾನಂದಪುರಿ ಸ್ವಾಮೀಜಿ ಬಳಿ ಹೋಗಿ ಬಹಿರಂಗವಾಗಿಯೇ ಕ್ಷಮೆಯಾಚಿಸಬೇಕು. ಇಲ್ಲವಾದರೆ ಕುರುಬ ಸಮುದಾಯದ ಪ್ರಬಲ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಕುರುಬ ಸಮುದಾಯದ ಯುವ ಮುಖಂಡ ಕೆ.ನಾಗರಾಜ ಬಂಡಿಹಟ್ಟಿ, ಗುಗ್ಗರಹಟ್ಟಿ ಶ್ರೀಕಾಂತ, ಅಮರಾಪುರ ಮಂಜುನಾಥ, ಕೋರ್ಟ ಮೋಹನ, ಕೊಳಗಲ್ಲು ವಿನಯ ಕುಮಾರ, ಕಕ್ಕಬೇವಿನಹಳ್ಳಿ ಹೊನ್ನಪ್ಪ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 