ಲೋಕದರ್ಶನ ವರದಿ
ಬಳ್ಳಾರಿ 14: ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಆದ ಕಾರಣ ಆ ಇಲಾಖೆಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನ ಒದಗಿಸುವುದು ನಮ್ಮ ಮೊದಲ ಆದ್ಯತೆ, ಕಾಮಗಾರಿಗಳಿಗೆ ನಿಗದಿಪಡಿದ ಅನುದಾನದಲ್ಲಿ ಒಂದು ರೂಪಾಯಿ ಸಹ ವ್ಯರ್ಥವಾಗಲು ಅವಕಾಶ ನೀಡಬಾರದು ಎಂದು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಮೂರನೇ ತ್ರೈಮಾಸಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಶಿಥಿಲಗೊಂಡ ಕೊಠಡಿಗಳು ಕಂಡುಬಂದಿದ್ದು, ಅವುಗಳನ್ನು ಶೀಘ್ರದಲ್ಲಿಯೇ ದುರಸ್ತಿಪಡಿಸಲು ಅಧಿಕಾರಿಗಳು ಮುಂದಾಗಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಮತ್ತು ಕಟ್ಟಡದ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು; ಯಾವುದೇ ಕಾರಣಕ್ಕೂ ಕುಂಟುನೆಪಗಳನ್ನು ಹೇಳಿಕೊಂಡು ಕೆಲಸಗಳನ್ನು ಮುಂದೂಡಬೇಡಿ ಎಂದು ಹೇಳಿದ ಶಾಸಕ ನಾಗೇಂದ್ರ ಅವರು ನಿವೇಶನಗಳ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ಅಥವಾ ಗ್ರಾಪಂ ಸದಸ್ಯರಿಗೆ ಅಥವಾ ಜಿಪಂ ಸದಸ್ಯರಿಗೆ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.
ವಿವಿಧ ಇಲಾಖೆಗಳ ಹಳೆಯ ಕಟ್ಟಡಗಳು ಬಳಕೆಗೆ ಯೋಗ್ಯವಲ್ಲದಂತಹ ಕಟ್ಟಡಗಳನ್ನು ನೆಲಸಮಮಾಡಿ ಅದೇ ಸ್ಥಳದಲ್ಲಿಯೇ ಹೊಸ ಕಟ್ಟಡಗಳ ನಿಮರ್ಾಣಕ್ಕೆ ಅನುಮೊದನೆ ಪಡೆಯಲು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಸೂಚಿಸಿದರು. ಕಾಮಗಾರಿಗಳಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಕಾರ್ಯನಿವರ್ಾಹಕ ಅಧಿಕಾರಿ ಎಂ.ಬಸಪ್ಪ, ಜಿಪಂ ಸದಸ್ಯರಾದ ಎಮ್ಮಿಗನೂರು ಬನಶಂಕರಿ, ಮಾನಯ್ಯ, ತಾ.ಪಂ.ಉಪಾಧ್ಯಕ್ಷೆ ಟಿ.ಪುಷ್ಪವತಿ, ತಹಶೀಲ್ದಾರ್ ಯು.ನಾಗರಾಜ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಪಿ.ಡಿ.ಒ ಅಧಿಕಾರಿಗಳು ಇದ್ದರು.
ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಸುಧೀರ್ಘ ಚಚರ್ೆ ನಡೆಯಿತು.