ಬಳ್ಳಾರಿ: ಜ.26ರಂದು ವಿಜೃಂಭಣೆಯ ಗಣರಾಜ್ಯೋತ್ಸವ ಆಚರಣೆ

ಲೋಕದರ್ಶನ ವರದಿ

ಬಳ್ಳಾರಿ 24: ಜಿಲ್ಲಾಡಳಿತ ವತಿಯಿಂದ 71ನೇ ಗಣರಾಜ್ಯೋತ್ಸವ ದಿನಾಚಾರಣೆಯನ್ನು ಜ.26ರಂದು ಅತ್ಯಂತ ವಿಜೃಂಭಣೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್  ತಿಳಿಸಿದ್ದಾರೆ. ಉಪಮುಖ್ಯಮಂತ್ರಿ, ಸಾರಿಗೆ ಮತ್ತು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ವಿಮ್ಸ್ ಆವರಣದಲ್ಲಿರುವ ಮಹಾತ್ಮ ಗಾಂಧಿಜಿಯವರ ಪ್ರತಿಮೆಗೆ ಬೆಳಗ್ಗೆ 8.45ಕ್ಕೆ ಗೌರವ ಸಮರ್ಪಣೆ ಮಾಡಲಿದ್ದಾರೆ. 

ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಬೆಳಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸಿ ಪಥ ಸಂಚನಲನ ವೀಕ್ಷಣೆ ಹಾಗೂ ಗೌರವ ಸ್ವೀಕರಿಸಲಿದ್ದಾರೆ. ನಂತರ ಸಚಿವರು ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಇದಾದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ವಿವರಿಸಿದ್ದಾರೆ. 

ಜಿಪಂ ಅಧ್ಯಕ್ಷರಾದ ಸಿ.ಭಾರತಿ ತಿಮ್ಮರೆಡ್ಡಿ, ಸಂಸದರಾದ ವೈ.ದೇವೇಂದ್ರಪ್ಪ, ಜಿ.ಎಂ.ಸಿದ್ದೇಶ್ವರ, ಕರಡಿ ಸಂಗಣ್ಣ, ಡಾ. ಸೈಯದ್ ನಾಸೀರ್ ಹುಸೇನ್, ಶಾಸಕರಾದ ಆನಂದ್ಸಿಂಗ್, ಈ.ತುಕಾರಾಂ, ಬಿ.ನಾಗೇಂದ್ರ, ಪಿ.ಟಿ ಪರಮೇಶ್ವರ ನಾಯ್ಕ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯಕ್ ಎಲ್.ಸಿ.ಪಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿ.ಕರುಣಾಕರ ರೆಡ್ಡಿ, ಜಿ.ಸೋಮಶೇಖರರೆಡ್ಡಿ, ಎಂ.ಎಸ್. ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಬಿ.ಪಾಟೀಲ, ತಾಪಂ ಅಧ್ಯಕ್ಷರಾದ ಎಸ್.ಆರ್.ಲೀಲಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಂಜೆ 6ಕ್ಕೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿವೆ