ಬಳ್ಳಾರಿ: ಗಮನ ಸೆಳೆದ ಶಿವಾಜಿ ಜಯಂತಿ ಮೆರವಣಿಗೆ

ಲೋಕದರ್ಶನ ವರದಿ

ಬಳ್ಳಾರಿ 19: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಬುಧವಾರದಂದು ಛತ್ರಪತಿ ಶಿವಾಜಿ ಜಯಂತಿಯ ಅಂಗವಾಗಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಸಂಜೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಗಿ ಚನ್ನಪ್ಪ ವೃತ್ತದ ಮಾರ್ಗವಾಗಿ  ಬೆಂಗಳೂರು ರಸ್ತೆ, ಎಚ್.ಆರ್.ಗವಿಯಪ್ಪ ವೃತ್ತದ ಮೂಲಕ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಿತು.

ವಿವಿಧ ಕಲಾತಂಡಗಳ ಪ್ರದರ್ಶನಗಳು  ಜನರ ಗಮನಸೆಳೆದವು. ಡಿ.ವೈ.ಎಸ್.ಪಿ ರಾಮ್ ರಾವ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣನವರ್ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು