ಬಳ್ಳಾರಿ: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಸೋಮಶೇಖರ್ ಕರ

ಲೋಕದರ್ಶನ ವರದಿ

ಬಳ್ಳಾರಿ 19: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಯೋಜನೆಗಳಿಂದ ಉದ್ಯಮಗಳನ್ನು ಸ್ಥಾಪನೆ ಮಾಡಿ, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದರ ಮೂಲಕ ನಿರುದ್ಯೋಗ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಲಾಖೆಯ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದದ್ರ ಜಂಟಿ ನಿರ್ದೇಶಕರಾದ ಬಿ.ಸೋಮಶೇಖರ್ ಹೇಳಿದರು.

ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣದಲ್ಲಿ ಬುಧವಾರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸಂಯುಕ್ತಾಶ್ರ್ರಯದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ವರ್ಗದ ಅಭ್ಯಥರ್ಿಗಳಿಗೆ ಸ್ವ-ಉದ್ಯೋಗಕ್ಕಾಗಿ ಉದ್ಯಮಶೀಲತಾ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿದರ್ೇಶಕರಾದ ರಂಗನಾಥ ಉದ್ಯಮದಲ್ಲಿ ಯಶಸ್ವಿಯಾಗಲು ತರಬೇತಿ ಮತ್ತು ಉದ್ಯಮಶೀಲತೆಯ ಗುಣಲಕ್ಷಣಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ ಎಂದರು.   

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯ ನಿದರ್ೇಶಕರಾದ ಭರತ್.ಬಿ ಅವರು ಸರಕಾರಿ ಸೌಲಭ್ಯ, ಬ್ಯಾಂಕ್ ಸೌಲಭ್ಯ, ಹಣಕಾಸಿನ ನಿರ್ವವಹಣೆ ಬಗ್ಗೆ ತಿಳುವಳಿಕೆ ನೀಡಿದರು.

 ಈ ಸಂದರ್ಭದಲ್ಲಿ ಜಂಟಿ ನಿದರ್ೇಶಕ ಜಿ.ಯು.ಹುಡೇದ್, ಖಾದಿ ಗ್ರಾಮೂದ್ಯೋಗ ಇಲಾಖೆ ಅಧಿಕಾರಿ ಸಿಡಾಕ್ ಗೊವಿಂದಪ್ಪ, ವಿಸ್ತರಣಾಧಿಕಾರಿ ವಿಜಯಕುಮಾರ್, ಸಂಪನ್ಮೂಲ ವ್ಯಕ್ತಿ ಪ್ರಸನ್ನ, ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.