ಬಳ್ಳಾರಿ: ಅಸಾಂಕ್ರಾಮಿಕ ರೋಗ ನಿವಾರಣೆಗೆ ಚಿಕಿತ್ಸೆ ಅಗತ್ಯ ವೈದ್ಯಾಧಿಕಾರಿ ಡಾ.ಹೆಚ್.ನಿಜಾಮುದ್ದಿನ ಹೇಳಿಕೆ

ಲೋಕದರ್ಶನ ವರದಿ

ಬಳ್ಳಾರಿ 18: ಅಸಾಂಕ್ರಾಮಿಕ ರೋಗಗಳ ನಿವಾರಣೆಗೆ ಸರಿಯಾದ ಚಿಕಿತ್ಸೆ ಅಗತ್ಯ ಎಂದು ಎನ್ಸಿಡಿ ಘಟಕ ರೂಪನಗುಡಿಯ ವೈದ್ಯಾಧಿಕಾರಿಗಳಾದ ಡಾ.ಹೆಚ್.ನಿಜಾಮುದ್ದಿನ್ ಅವರು ಹೇಳಿದರು. 

ರೂಪನಗುಡಿಯ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಮಂಗಳವಾರ ಬೂಬ್ಬಕುಂಟ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಸಾಂಕ್ರಮಿಕ ರೋಗಗಳ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.  

ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳ ಜೊತೆಯೊಂದಿಗೆ ಅಸಾಂಕ್ರಾಮಿಕ ರೋಗಗಳಾದ ರಕ್ತದ ಒತ್ತಡ, ಮಧುಮೇಹ, ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿಸಿದ ಖಾಯಿಲೆಗಳು ಸಹ ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದಿದ್ದು ಅವುಗಳ ಅಡ್ಡ ಪರಿಣಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ತುತ್ತಾಗುತ್ತಿದ್ದಾರೆ ಎಂದು ಹೇಳಿದ ಅವರು ಕಳೆದ ಮೂರು ವರ್ಷಗಳಿಂದ ಜಿಲ್ಲಾ ಮತ್ತು ತಾಲೂಕು ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಎನ್ಸಿಡಿ ಘಟಕಗಳನ್ನು ಸ್ಥಾಪಿಸಿ, ಸಿಬ್ಬಂದಿಗಳನ್ನು ನಿಯೋಜಿಸಿ ಜನರಲ್ಲಿ ಕಾಣುವ ಖಾಯಿಲೆಗಳನ್ನು ಪತ್ತೆ ಹಚ್ಚುವುದು ಮತ್ತು ಅವುಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು. 

ಬೂಬ್ಬಕುಂಟ ಉಪ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಬಿ.ಎಸ್.ವಹಾಬ್ ಅವರು ಸಾರ್ವಜನಿಕರಲ್ಲಿ ರಕ್ತದ ಒತ್ತಡ, ಮಧುಮೇಹ, ಕ್ಯಾನ್ಸರ್ ಹಾಗೂ ಇತರೆ ಅಸಾಂಕ್ರಾಮಿಕ ವಿಷಯಗಳ ಕುರಿತು ಹಾಗೂ ಔಷಧ ಸೇವನೆಯಿಂದ ಹೇಗೆ ನಿವಾರಿಸಿಕೊಳ್ಳಬಹುದೆಂದು ಸಂಕ್ಷಿಪ್ತವಾಗಿ ಹೇಳಿದರು.

ಕಾರ್ಯಕ್ರಮಕ್ಕೆ  ಗ್ರಾಮದ ಮುಖಂಡರಾದ ಹನುಮಂತನಗೌಡ ರವರು ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅಧ್ಯಾಪಕಿ ಮೀನಾಕ್ಷಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕತರ್ೆಯರು ಹಾಗೂ ಸಾರ್ವಜನಿಕರು ಇದ್ದರು.