ಲೋಕದರ್ಶನ ವರದಿ
ಬಳ್ಳಾರಿ 07: ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಟಾಪ್ 10ರೊಳಗೆ ಬರುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕು ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಗುರುಭವನದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಖನಿಜ ನಿಧಿ ಅಡಿಯ ಅನುದಾನ ಬಳಸಿಕೊಂಡು ಗುರುಭವನ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆಸಲಾಗುವುದು. ಈಗ ಜಾರಿಯಲ್ಲಿರುವ ನೂತನ ಪಿಂಚಣಿ ಸರಿಯಲ್ಲ ಎಂದು ಹೇಳಿದ ಅವರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಶಿಕ್ಷಕರಿಗೆ ಅಭಯ ನೀಡಿದರು.
ಸಮಾಜ ಸರಿದಾರಿಗೆ ನಡೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಮಕ್ಕಳಲ್ಲಿ ನೈತಿಕ ಶಿಕ್ಷಣ ಬೆಳೆಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ ಅವರು ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಎ.ಶ್ರೀಧರನ್ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಗೌರವಯುತವಾದುದು. ಕಲಿತು ಕಲಿಸಿದರೆ, ಒಳ್ಳೆಯ ಸಮಾಜ ನಿರ್ಮಾಣಕ್ಕೆ ನಾಂದಿ; ಹಾಗಾಗಿ ಶಿಕ್ಷಕರು ಮೊದಲು ಕಲಿತುಕೊಳ್ಳಬೇಕು. ಪ್ರಕೃತಿಯನ್ನು ಮೊದಲು ಉಳಿಸಿಕೊಳ್ಳಬೇಕು . ಅದರಿಂದ ಉತ್ತಮ ಆರೋಗ್ಯದೊಂದಿಗೆ ಉತ್ತಮ 'ವಿಷಯವೂ ದೊರೆಯಲಿದೆ ಎಂದರು.
ಜಿಲ್ಲೆಯ ಒಂಬತ್ತು ತಾಲ್ಲೂಕಿನ 15 ಜನ ಪ್ರಾಥಮಿಕ ಮತ್ತು 8 ಜನ ಪ್ರೌಢಶಾಲೆಗಳ ಉತ್ತಮ ಶಿಕ್ಷಕರಿಗೆ ಜಿಲ್ಕಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು.
ಡಯಟ್ ಉಪನಿರ್ದೇಶಕ ರಾಯಪ್ಪ ರೆಡ್ಡಿ, ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್, ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಕರ ಸಂಘಟನೆಗಳ ರಾಜ್ಯ ಉಪಾಧ್ಯಕ್ಷ ಕೆ.ಹನುಮಂತಪ್ಪ, ಜಿಲ್ಲಾಧ್ಯಕ್ಷ ಸಿ.ನಿಂಗಪ್ಪ,
ವಿ.ಟಿ.ದಕ್ಷಿಣ ಮೂರ್ತಿ, ಶಿವಲಿಂಗರೆಡ್ಡಿ, ಕೃಷ್ಣವೇಣಿ, ಎ.ಕೆ.ರಾಮಣ್ಣ, ಗುಂಡಪ್ಪನವರ ನಾಗರಾಜ, ಶಿವಾಜಿರಾವ್, ಎಂ.ಕುಮಾರಸ್ವಾಮಿ, ಕೆ.ಎರರ್ಿಸ್ವಾಮಿ, ಸೈಯದ್ ಶಬ್ಬೀರ್ ಹುಸೇನ್, ಜೆ.ಎಂ.ಆರ್.ಬಸವರಾಜ್, ಯು.ರಮೇಶ್, ಗುಂಡಾಚಾರಿ ಮತ್ತಿತರರಿದ್ದರು.