ಬಳ್ಳಾರಿ: ಮತಚಲಾಯಿಸಿ ಪ್ರಜಾಪ್ರಭುತ್ವ ಬಲಪಡಿಸಿ: ನ್ಯಾ.ಅರ್ಜುನ್

ಲೋಕದರ್ಶನ ವರದಿ

ಬಳ್ಳಾರಿ 25: ಮತದಾನ ಸಂವಿಧಾನ ನೀಡಿರುವ ಹಕ್ಕು; ಅದನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಯೋಗ್ಯರಿಗೆ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವ ಬಲಪಡಿಸಬೇಕು. ಈ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕಾರಣಿಕರ್ತರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾ.ಅರ್ಜುನ್ ಮಲ್ಲೂರ್ ಹೇಳಿದರು.

ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ನೆರೆದ ವಿದ್ಯಾರ್ಥಿ  ಸಮುದಾಯಕ್ಕೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ನಮ್ಮ ಜನಪ್ರತಿನಿಧಿಗಳನ್ನು ನಾವೇ ಆಯ್ಕೆಮಾಡಿಕೊಳ್ಳುವುದಕ್ಕೆ ಸಂವಿಧಾನ ಕಲ್ಪಿಸಿರುವ ಅಪೂರ್ವ ಅವಕಾಶ ಈ ಮತ. ಯಾವುದೇ ರೀತಿಯ ಆಮಿಷಕ್ಕೆ ಒಳಗಾಗಿ ಮತಚಲಾಯಿಸಿ ನಂತರ ನಮ್ಮ ಜನಪ್ರತಿನಿಧಿಗಳು ಕೆಲಸ ಮಾಡುತ್ತಿಲ್ಲ ಎಂದು ಪೇಚಾಡಿಕೊಳ್ಳದೇ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಎಂ.ಮಂಜುನಾಥ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನವಾದ ಮತದಾನದ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಅತ್ಯಮೂಲ್ಯವಾದ ಹಕ್ಕು ಇದಾಗಿದ್ದು, ಭವಿಷ್ಯದ ಪ್ರಜೆಗಳಾಗಿರುವ ವಿದ್ಯಾಥರ್ಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು ಮತ್ತು ಯೋಗ್ಯರಿಗೆ ಚಲಾಯಿಸಬೇಕು ಎಂದರು.

ಜಿಪಂ ಮುಖ್ಯಲೆಕ್ಕಾಧಿಕಾರಿ ಜಾನಕಿರಾಮ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜಪ್ಪ,ಪ್ರೊ.ಜನಾರ್ಧನರೆಡ್ಡಿ, ಡಿಡಿಪಿಐ ರಾಮಪ್ಪ, ಪುರಸಭೆ ತಹಸೀಲ್ದಾರ್ ವಿಶ್ವಜಿತ್ ಮೆಹತಾ,ಚುನಾವಣಾ ತಹಸೀಲ್ದಾರರಾದ ಹೊನ್ನಮ್ಮ, ಚುನಾವಣಾ ಸಿಬ್ಬಂದಿ ಸೇರಿದಂತೆ ಅನೇಕರು ಇದ್ದರು. ವಿನೋದ್ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸದಾಗಿ ನೋಂದಾಯಿತರಾದ ಯುವಮತದಾರರಿಗೆ ಗುರುತಿನ ಚೀಟಿಗಳನ್ನು ಗಣ್ಯರು ವಿತರಿಸಿದರು. ಉತ್ತಮ ಬಿಎಲ್ಒ ಆಗಿ ಕಾರ್ಯನಿರ್ವಹಿಸಿದವರಿಗೂ ಇದೇ ಸಂದರ್ಭದಲ್ಲಿ ಪ್ರಶಂಸಾ ಪತ್ರ ವಿತರಿಸಲಾಯಿತು.

ಇದಕ್ಕೂ ಮುಂಚೆ ಸರಳಾದೇವಿ ಕಾಲೇಜಿನಿಂದ ವಿದ್ಯಾಥರ್ಿಗಳ ಬೃಹತ್ ಜಾಥಾ ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ತಲುಪಿತು.