ಲೋಕದರ್ಶನ ವರದಿ
ಬಳ್ಳಾರಿ 10: ಪ್ರಸ್ತುತ ದಿನಗಳಲ್ಲಿ ವಿದ್ಯಾಥರ್ಿಗಳು ಸಣ್ಣ-ಪುಟ್ಟ ವಿಷಯಗಳಿಗೆ ಕಿವಿಕೊಟ್ಟು ಆತ್ಮಹತ್ಯೆ ದಾರಿಗೆ ಸಾಗದೇ ತಮ್ಮ ಭವಿಷ್ಯದ ಗುರಿಯ ಕಡೆಗೆ ಗಮನಹರಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರ್ಜುನ್ ಎಸ್. ಮಲ್ಲೂರು ಅವರು ವಿದ್ಯಾಥರ್ಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಆಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪ್ರಥಮ ದಜರ್ೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿಕಿತ್ಸೆ ಎಲ್ಲೆಲ್ಲಿ ಲಭ್ಯ:
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಲ್ಲಿ ಸಾಮಾನ್ಯ ವೈದ್ಯಾಧಿಕಾರಿಗಳು ತರಬೇತಿ ಪಡೆದು ಈ ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಕೌಶಲ್ಯ ಹೊಂದುತ್ತಾರೆ. ಈ ಚಿಕಿತ್ಸೆಗಳು ರೋಗಿಗಳಿಗೆ ಹತ್ತಿರವೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಜಿಲ್ಲಾ ಅಥವಾ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗಳಲ್ಲಿ ಸರಿಯಾದ ಔಷಧಿಗಳ ವ್ಯವಸ್ಥೆಯು ಲಭ್ಯವಿದೆ ಎಂದರು.
ಸಹಾಯವಾಣಿ ಲಭ್ಯ:
ಮಾನಸಿಕವಾಗಿ ಬಲುತ್ತಿರುವವರ ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯ ಇಲಾಖೆಯು ತುರ್ತು ದೂ.ಸಂ 104 ಹಾಗೂ 108 ಕರೆ ಮಾಡುವ ಮುಖಾಂತರವಾಗಿ ರೋಗಿಗಳ ಆರೋಗ್ಯವನ್ನು ಕಾಪಾಡಬಹುದು.
ಇದೇ ಸಂದರ್ಭದಲ್ಲಿ ಮಾನಸಿಕ ಆರೋಗ್ಯದ ಕುರಿತು ಏರ್ಪಡಿಸಿದ್ದ ಭಾಷಣ ಸ್ಪರ್ದೇಯಲ್ಲಿ ವಿಜೇತರಾದ ಭುವನ, ರಮೇಶ, ಹಾಗೂ ಕುಮದ ಅವರಿಗೆ ಬಹುಮಾನವನ್ನು ವಿತರಿಸಲಾಯಿತು.
ನಗರದ ವಿಮ್ಸ್ನ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ.ಕೊಟ್ರೇಶ್ ಮತ್ತು ಮನೋತಜ್ಞ ಡಾ.ಸಲೀಂ ಅವರು ವಿಶೇಷ ಉಪನ್ಯಾಸ ನೀಡಿದರು.
ಸರಳದೇವಿ ಸತೀಶ್ಚಂದ್ರ ಅಗರವಾಲ್ ಸಕರ್ಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ನಾಗರಾಜ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಎ.ನಾಗರಾಜ್ ಅವರು ಅತಿಥಿಗಳಾಗಿ ಆಗಮಿಸಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ಹೆಚ್.ದಾಸಪ್ಪನವರು ನಿರೂಪಿಸಿದರು. ಸರಳದೇವಿ ಸತೀಶ್ಚಂದ್ರ ಅಗರವಾಲ್ ಸಕರ್ಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಮರಗಿರಿ ವಂದಿಸಿದರು.
ಈ ಸಂದರ್ಭದಲ್ಲಿ ಸರಳಾದೇವಿ ಕಾಲೇಜಿನ ಪ್ರಾಧ್ಯಾಪಕ ಮಧುಸೂದನ್, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಶಾಂತಪ್ಪ, ಹುಲುಗಪ್ಪ, ಮಹೇಶ್, ಮಲ್ಲಿಕಾರ್ಜುನ್, ತಂಗಮ್ಮ, ಪಂಚಾಕ್ಷರಯ್ಯ, ಕಾವ್ಯ, ಸುಮನ, ಪ್ರಿಯಾಂಕ, ಕಾಲೇಜಿನ ವಿದ್ಯಾಥರ್ಿಗಳು ಹಾಗೂ ಇತರರು ಇದ್ದರು.