ಲೋಕದರ್ಶನ ವರದಿ
ಬಳ್ಳಾರಿ 17: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಸರಕಾರ ವಿಶೇಷ ಒತ್ತು ನೀಡಿದ್ದು, ಕಲ್ಯಾಣ ಕನರ್ಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 2013-14ನೇ ಸಾಲಿನಿಂದ 2019-20 ಸಾಲಿನವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು ರೂ.832.82 ಕೋಟಿ ಅನುದಾನ ಹಂಚಿಕೆಯಾಗಿದ್ದು. ಒಟ್ಟು 3255 ಕಾಮಗಾರಿಗಳನ್ನು ಕೈಗೆತ್ತಿಕೊಂಡು 2104 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ ರೂ.422.68 ಕೋಟಿ ಅನುದಾನ ವೆಚ್ಚ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಆಗಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಕಲ್ಯಾಣ ಕನರ್ಾಟಕ ಉತ್ಸವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದ ವತಿಯಿಂದ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮಮದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಬಳ್ಳಾರಿ ಜಿಲ್ಲೆಯ ಅಭ್ಯಥರ್ಿಗಳಿಗೆ ಅರ್ಹತ ಪ್ರಮಾಣ ಪತ್ರಗಳನ್ನು ಸಹ ವಿತರಿಸಲಾಗಿದೆ. ಬಳ್ಳಾರಿ ಜಿಲ್ಲೆಯಿಂದ ವಿವಿಧ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ 371 (ಜೆ) ಮೀಸಲಾತಿ ಅಡಿಯಲ್ಲಿ ಆಯ್ಕೆಯಾಗಿ ಉದ್ಯೋಗ ಪಡೆದಿದ್ದಾರೆ ಎಂದು ಅವರು ವಿವರಿಸಿದರು.
ಅರ್ಹರಿಗೆ ಪಿಂಚಣಿ 9420 ಅರ್ಹ ಫಲಾನುಭವಿಗಳಿಗೆ ವಿತರಣೆ:
ಜಿಲ್ಲೆಯಲ್ಲಿ ಸರ್ಕಾರದ ಯೋಜನೆಯಾದ ರಾಷ್ಟೀಯ ಸಮಾಜಿಕ ಭದ್ರತಾ ಯೋಜನೆಯಡಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಕಂದಾಯ ಅಧಿಕಾರಿಗಳು ತಮ್ಮಲ್ಲಿ ಲಭ್ಯವಿರುವ ಓ.ಟಿ.ಸಿ. ಮಾಹಿತಿಯನ್ನು ಆಧಾರವಾಗಿಟ್ಟಿಕೊಂಡು ಸ್ವಯಂ ಪ್ರೇರಿತವಾಗಿ 11609 ಅರ್ಹ ಫಲಾನುಭವಿಗಳನ್ನು ಗುರುತಿಸಿರುತ್ತಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಸಂಬಂಧ ಜಿಲ್ಲಾಡಳಿತ ವತಿಯಿಂದ ನಗರ ಪ್ರದೇಶದಲ್ಲಿ ಎಸ್.ಎಫ್.ಸಿ. ನಿಧಿಯಡಿ 2018-19ನೇ ಮತ್ತು 2019-20ನೇ ಸಾಲಿನಲ್ಲಿ ರೂ.701.49 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಒಟ್ಟು 295 ಕಾಮಗಾರಿಗಳನ್ನು ಕೈಗೆತ್ತಿಕೊಂಡು ಈವರೆಗೆ ರೂ.224.60 ಲಕ್ಷ ವೆಚ್ಚ ಮಾಡಲಾಗಿದೆ ಎಂದರು.
3.27 ಕೋಟಿ ರೂ. ಪರಿಹಾರ ವಿತರಣೆ:
ಆಗಸ್ಟ್ 2019ರ ತಿಂಗಳಲ್ಲಿ ಮಲೆನಾಡು ಪ್ರದೇಶದಲ್ಲಿ ಸುರಿದ ಧಾರಾಕರ ಮಳೆಯಿಂದ ತುಂಗಭದ್ರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಹಿನ್ನೀರಿನ ತಾಲೂಕುಗಳಾದ ಹಡಗಲಿ ಮತ್ತು
ಹರಪನಹಳ್ಳಿ ತಾಲ್ಲೂಕುಗಳಲ್ಲಿ ಪ್ರವಾಹ ಸಂಭವಿಸಿದ್ದು
ಸಕರ್ಾರವು ಈ ಎರಡು ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದ್ದು. ಪ್ರವಾಹದಿಂದ ಸಂಭವಿಸಿದ ಮನೆಗಳ ಹಾನಿಗೆ ಸರ್ಕಾರದ ಆದೇಶದಂತೆ ಬಟ್ಟಿ ಮತ್ತು ಪಾತ್ರೆಗಳು ಹಾನಿಯಾದ ಒಟ್ಟು 802 ಕುಟುಂಬಗಳಿಗೆ ರೂ.10 ಸಾವಿರಗಳಂತೆ ಒಟ್ಟು ರೂ.80.20ಲಕ್ಷಗಳ ಪರಿಹಾರ ಹಾಗೂ 1030 ಮನೆಗಳ ಹಾನಿಗೆ ರೂ.25 ಸಾವಿರಗಳಂತೆ ಒಟ್ಟು ರೂ.2.575 ಕೋಟಿ ಪರಿಹಾರ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಈವರೆಗೆ ಎಸ್.ಡಿ.ಆರ್.ಎಫ್. ನಿಧಿಯಿಂದ ಕುಡಿಯುವ ನೀರಿಗೆ ಮತ್ತು ಮೇವು ವಿತರಣೆಗೆ ಒಟ್ಟು ರೂ.7 ಕೋಟಿ ಅನುದಾನ ವೆಚ್ಚ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಹೈಕ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸಿರಿಗೆರೆ ಪೊನ್ನರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಶಾಸಕರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಈ.ತುಕಾರಾಂ, ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ ಸೇರಿದಂತೆ ಅನೇಕರು ಇದ್ದರು.
ವಿನೋದ್ ನಿರೂಪಿಸಿದರು. ಈಶ್ವರ್ ಕಾಂಡೂ ವಂದಿಸಿದರು.