ಲೋಕದರ್ಶನ ವರದಿ
ಬಳ್ಳಾರಿ 05: ಗುಣಮಟ್ಟದ ಚಿಕಿತ್ಸೆಗೆ ಹೆಸರುವಾಸಿಯಾಗಿರುವ ಬಳ್ಳಾರಿ ಜಿಲ್ಲಾಸ್ಪತ್ರೆಯನ್ನು 300 ಹಾಸಿಗೆಗಳಿಂದ 500 ಹಾಸಿಗೆಗೆ ಮೇಲ್ದಜರ್ೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ಜಿಪಂ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 7.5ಕೋಟಿ ರೂ.ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರರ ವಸತಿ ಗೃಹಗಳು, ಸ್ಕೂಲ್ ಆಫ್ ನಸರ್ಿಂಗ್ ವಿದ್ಯಾರ್ಥಿಗಳ ವಸತಿ ನಿಲಯ, ಡಿಎನ್ಬಿ ಸೆಮಿನಾರ್ ಹಾಲ್ ಕಟ್ಟಡ ಕಾಮಗಾರಿಗಳಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕೂಡಲೇ ಈ ಆಸ್ಪತ್ರೆಯನ್ನು ಮೇಲ್ದಜರ್ೆಗೇರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಅಗತ್ಯ ಸಲಕರಣೆಗಳು, ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸದೃಢ ಭಾರತಕ್ಕಾಗಿ ಮತ್ತು ಸದೃಢ ಆರೋಗ್ಯಯುತ ಕನರ್ಾಟಕಕ್ಕಾಗಿ ಏನೆಲ್ಲಾ ಆರೋಗ್ಯಕರ ಕ್ರಮಗಳನ್ನು ಕೈಗೊಳ್ಳಬೇಕೋ ಅವುಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ ಸಚಿವ ಬಿ.ಶ್ರೀರಾಮುಲು ಅವರು, ಕಲ್ಯಾಣ ಕನರ್ಾಟಕದ 6ಜಿಲ್ಲೆಗಳ ಆಸ್ಪತ್ರೆಗಳಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಆ ಆಸ್ಪತ್ರೆಗಳಿಗೆ ಸೌಕರ್ಯ ಕಲ್ಪಿಸುವಿಕೆ ಹಾಗೂ ಮೇಲ್ದರ್ಜೆಗೇರಿಸುವಿಕೆಗೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಸೇರ್ಪಡೆ ಮಾಡಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದರು.
ಆಶಾ ಕಾರ್ಯಕತರ್ೆಯರಿಗೆ ಕೆಲದಿನಗಳ ಹಿಂದೆ 500 ಗೌರವ ಧನ ಹೆಚ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅವರ ಗೌರವ ಧನ 10ಸಾವಿರ ರೂ.ಹೆಚ್ಚಿಸಲು ಕ್ರಮವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದರಾದ ವೈ.ದೇವೇಂದ್ರಪ್ಪ, ಶಾಸಕರಾದ ಕೆ.ಸಿ.ಕೊಂಡಯ್ಯ ಮತ್ತು ಸೋಮಶೇಖರ್ ರೆಡ್ಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ನಿತೀಶ್, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಡಿಎಚ್ಒ ಡಾ.ಶಿವರಾಜ ಹೆಡೆ ಮತ್ತಿತರರು ಇದ್ದರು.