ಬಳ್ಳಾರಿ, ಜ 31,ಗಡಿನಾಡು ಬಳ್ಳಾರಿ ಶನಿವಾರ ಮತ್ತು ಭಾನುವಾರದ ಎರಡು ದಿನಗಳ ಕನ್ನಡ ಜಾತ್ರೆಗೆ ಸಜ್ಜಾಗುತ್ತಿದೆ. ನಗರದಲ್ಲಿ ಕನ್ನಡ ಸಾಹಿತ್ಯದ ಸಡಗರ ಸಂಭ್ರಮ ಮನೆ ಮಾಡಲಿದೆ. ಡಾ|| ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು. ಇದಕ್ಕಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಕನ್ನಡದ ಕೆಂಪು ಮತ್ತು ಹಳದಿ ಬಾವುಟಗಳು ರಾರಾಜಿಸುತ್ತಿವೆ.
ಹಳದಿ ಮತ್ತು ಕೆಂಪು ಬಣ್ಣದ ಬಾವುಗಳಿಂದ ನಗರ ಕಂಗೊಳಿಸುತ್ತಿದ್ದು, ಕನ್ನಡದ ತೇರಿಗಾಗಿ ಸಿಂಗಾರಗೊಳ್ಳುತ್ತಿದೆ. ಪ್ರೊ|| ಶಂಭು ಬಳಿಗಾರ ನುಡಿ ಜಾತ್ರೆಗೆ ಚಾಲನೆ ನೀಡಲಿದ್ದಾರೆಕನ್ನಡ ಭವನದಿಂದ ರಂಗಮಂದಿರದವರೆಗೆ ತಾಯಿ ಭುವನೇಶ್ವರಿ ಮೆರವಣಿಗೆ ನಡೆಯಲಿದ್ದು, ವಿವಿಧ ಜನಪದ ಕಲಾತಂಡಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾಹಿತ್ಯಾಭಿಮಾನಿಗಳು ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಅಧ್ಯಕ್ಷ ಡಾ.ಜೆ.ಎಂ.ನಾಗಯ್ಯ ಅಧ್ಯಕ್ಷೀಯ ಭಾಷಣ ಮಾಡಲಿದ್ದು, ಶಾಸಕ ಸೋಮಶೇಖರರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರ. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ 7 ಕೃತಿಗಳ ಲೋಕಾರ್ಪಣೆ ಮಾಡಲಾಗುತ್ತಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ.100ರಷ್ಟು ಅಂಕ ಪಡೆದ ಜಿಲ್ಲೆಯ 125 ವಿದ್ಯಾರ್ಥಿಗಳಿಗೆ. ಜೊತೆಗೆ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 41 ಜನರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಕನ್ಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ತಿಳಿಸಿದ್ದಾರೆ.