ಬಳ್ಳಾರಿ; ನಿರಾಶ್ರಿತರಿಗೆ ಒಂದು ಲಕ್ಷ ರೂಪಾಯಿ ಚೆಕ್ ದೇಣಿಗೆ

ಲೋಕದರ್ಶನ ವರದಿ

ಬಳ್ಳಾರಿ 14: ಕಳೆದ ಕೆಲ ದಿನಗಳಿಂದ ಕರ್ನಾಟಕದ ಉತ್ತರ, ಕರಾವಳಿ ಮತ್ತು ದಕ್ಷಿಣ ಭಾಗದ 17ಕ್ಕೂ ಹೆಚ್ಚು ಜಿಲ್ಲೆಗಳು ಮಳೆಯಿಂದ ಮತ್ತು ಮಹರಾಷ್ಟ್ರದ ಕೊಯ್ನಾ ಆಣೆಕಟ್ಟೆಯಿಂದ ಹೊರ ಬಿಟ್ಟ ನೀರಿನಿಂದ ರಾಜ್ಯದ ಎಲ್ಲಾ ನದಿಗಳು ಉಕ್ಕಿ ಹರಿದು ಈ ಜಿಲ್ಲೆಗಳ ಹಲವಾರು ಊರುಗಳು ನೀರಿನಲ್ಲಿ ಮುಳುಗಿ ಅಲ್ಲಿನ ನಿವಾಸಿಗಳು ತಮ್ಮ ಮನೆ, ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರ ಈ ಕಷ್ಟಕರವಾದ ಪರಿಸ್ಥಿತಿಯಲ್ಲಿ ನಮ್ಮ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರು ಅಳಿಲು ಸೇವೆಯ ಭಾಗವಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒಂದು ಲಕ್ಷ ರೂಪಾಯಿಗಳ ಚೆಕ್ನ್ನು ಬಳ್ಳಾರಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್.ಎಸ್.ನಕುಲ್ ಅವರ ಮೂಲಕ ಮುಖ್ಯಮಂತ್ರಿಗಳ ನೆರೆಹಾವಳಿ ಪರಿಹಾರ ನಿಧಿಗೆ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವಕುಮಾರ್ ಕೌತಾಳ್, ಪ್ರಧಾನ ಕಾರ್ಯದರ್ಶಿಗಳಾದ ಗಂಗಪ್ಪ ಪತ್ತಾರ್, ಬಳ್ಳಾರಿ ವಲಯ ಕಾರ್ಯದರ್ಶಿಗಳಾದ ಡಾ. ವೆಂಕಟಯ್ಯ ಅಪ್ಪಗೆರೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಪಾಟೀಲ್ ಮಲ್ಲನಗೌಡ ಮತ್ತು ಸುರೇಶ್ ಅವರುಗಳು ಉಪಸ್ಥಿತರಿದ್ದರು.