ನಗರದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಶಾಸಕ ಭರತ್ ರೆಡ್ಡಿ ಸೂಚನೆ
Bellary Urban Development Authority meeting
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಸಭೆ
ಬಳ್ಳಾರಿ 27: ನಗರದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಇನ್ನಷ್ಟು ವೇಗ ನೀಡಬೇಕು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಸಾರ್ವಜನಿಕ ಉದ್ಯಾನಗಳು ಹಾಗೂ ನಾಗರಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ವಿಶೇಷವಾಗಿ ಪರೀಶೀಲನೆ ನಡೆಸಿದರು.ನಗರದ ವೇಗವಾಗಿ ವಿಸ್ತರಿಸುತ್ತಿರುವ ಪ್ರದೇಶಗಳಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ, ಜನರಿಗೆ ಯಾವುದೇ ತೊಂದರೆ ಆಗದಂತೆ ಕಾಮಗಾರಿಗಳನ್ನು ಸಮಯಕ್ಕೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಂದ ಬರುತ್ತಿರುವ ದೂರುಗಳು ಹಾಗೂ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ನಗರದ ಸೌಂದರ್ಯೀಕರಣ ಹಾಗೂ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ತಿಳಿಸಿದ ಶಾಸಕ ಭರತ್ ರೆಡ್ಡಿ, ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಅತ್ಯಂತ ಮುಖ್ಯ ಎಂದು ಹೇಳಿದರು.
ಸರ್ಕಾರದ ಅನುದಾನವನ್ನು ಸಮರ್ಕವಾಗಿ ಬಳಸಿಕೊಂಡು ನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.ಸಭೆಯಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು, ನಾಮ ನಿರ್ದೇಶಿತ ಸದಸ್ಯರಾದ ಥಿಯೇಟರ್ ಶಿವು, ರಾಕಿ, ಭರತ್, ಆಯುಕ್ತ ಖಲೀಲಸಾಬ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 