ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಅಭಿವೃದ್ಧಿಗಾಗಿ ಬಳ್ಳಾರಿ ಮತ್ತು ಮೈಸೂರು ಚೇಂಬರ್ ಒಡಂಬಡಿಕೆ

Bellary and Mysore Chambers sign agreement for trade and entrepreneurship development

ಮೈಸೂರು, ಮಾ. 15: ವಾಣಿಜ್ಯ ಮತ್ತು ಕೈಗಾರಿಕೆಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಪರಸ್ಪರ ಸಹಕಾರ ನೀಡಲು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜೊತೆಯಲ್ಲಿ ಜಂಟಿ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.  

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಹಾಗೂ ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜ್ ಅವರು ಮೈಸೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಒಡಂಬಡಿಕೆಗೆ ಸಹಿ ಮಾಡಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಕೇವಲ ವ್ಯಾಪಾರ ಹಿ ವಾಣಿಜ್ಯಕ್ಕೆ ಸೀಮಿತವಾಗದೇ ಯುವಶಕ್ತಿಗೆ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಿ ಸ್ಕಿಲ್ ಡೆವಲಪ್‌ಮೆಂಟ್, ದೇಶದ ಬೆನ್ನೆಲುಬಾಗಿರುವ ರೈತರಿಗೆ ಉಚಿತವಾಗಿ ‘ರೈತಣ್ಣನ ಊಟ’, ‘ರೈತಣ್ಣನ ಕ್ಲಿನಿಕ್‌’ ಮತ್ತು ‘ರೈತಣ್ಣನ ಹಾಸಿಗೆ’ ಜನಪ್ರಿಯ ಸೇವಾ ಯೋಜನೆಗಳನ್ನು ನಿರ್ವಹಿಸುತ್ತಿದೆ. ಈ ಯೋಜನೆಗಳಿಗೆ ಸಮಾಜದ ಎಲ್ಲಾ ವರ್ಗಗಳಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಾಣಿಜ್ಯ ಮತ್ತು ಕೈಗಾರಿಕಾ ಅಭಿವೃದ್ಧಿಗಾಗಿ ಮೈಸೂರು ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು ಜಂಟಿಯಾಗಿ ಕೆಲಸ ಮಾಡುವ ನಿಟ್ಟಿನಿಲ್ಲಿ ಒಡಂಬಡಿಕೆಗೆ ಸಹಿ ಹಾಕಿರುವುದು, ಸೇವಾ ಕ್ಷೇತ್ರದಲ್ಲೂ ಹೊಸ ಅವಕಾಶಗಳಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸಲಿದೆ ಎಂದರು. ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜ್ ಅವರು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಳ್ಳುತ್ತಿರುವುದು ಎರೆಡೂ ಜಿಲ್ಲೆಗಳ  ಉದ್ಯಮವಲಯದಲ್ಲಿ ಹೊಸತನಕ್ಕೆ ಅವಕಾಶ ಒದಗಿಸಿದೆ.  

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ‘ರೈತಣ್ಣನ ಊಟ’ದಿಂದ ಸ್ಫೂರ್ತಿ ಪಡೆದು 10 ರೂಪಾಯಿಗೆ ನಮ್ಮ ಸಂಸ್ಥೆ ಎಪಿಎಂಸಿಯಲ್ಲಿ ಎಲ್ಲರಿಗೂ ಮಧ್ಯಾಹ್ನದ ಊಟ ನೀಡುವ ಸೇವೆ ಪ್ರಾರಂಭಿಸಿದ್ದೇವೆ. ಬಳ್ಳಾರಿ ಸಂಸ್ಥೆಯು ಅನೇಕ ವಿಷಯಗಳಲ್ಲಿ ನಾಡಿಗೇ ಮಾದರಿಯಾಗಿದೆ ಎಂದರು.ಮೈಸೂರು ಜಿಲ್ಲಾ ಹೋಟಲ್ ಓರ್ಸ್‌ ಅಸೋಸಿಯೇಷನ್ ಅಧ್ಯಕ್ಷ, ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕರಾಗಿರುವ ನಾರಾಯಣಗೌಡ ಅವರು, ಮೈಸೂರಿನಲ್ಲಿ 34 ಪ್ರವಾಸಿ ಸ್ಥಳಗಳಿದ್ದು, 25 ಕ್ಕೂ ಹೆಚ್ಚು ಸ್ಟಾರ್ ಹೋಟಲ್‌ಗಳು, 450ಕ್ಕೂ ಹೆಚ್ಚು ಲಾಡ್ಜ್ಗಳು, ರೆಸ್ಟೋರೆಂಟುಗಳು ಇದ್ದು, ಪ್ರತ್ಯಕ್ಷವಾಗಿ - ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚಿನ ಜನರು ಹೋಟಲ್ ಉದ್ಯಮದಲ್ಲಿ ಪಾಲ್ಗೊಂಡಿದ್ದಾರೆ. ಪ್ರವಾಸೋದ್ಯಮವೇ ಜಿಲ್ಲೆಯ ಜೀವಾಳ. ಮೈಸೂರು ಮತ್ತು ಬಳ್ಳಾರಿ ಸಂಸ್ಥೆಗಳ ಒಡಂಬಡಿಕೆಯು ಪರಸ್ಪರರಲ್ಲಿ ಹೊಸ ಅವಕಾಶಗಳ ಸೃಷ್ಠಿಗೆ ಅವಕಾಶ ನೀಡಲಿದೆ ಎಂದರು.  

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಕೇವಲ ಕಬ್ಬಿಣ ಮತ್ತು ಮ್ಯಾಂಗನೀಸ್ ಉದ್ಯಮಗಳು ಅಲ್ಲದೇ, ರಾಷಿೊಥಯ ಮತ್ತು ಅಂತಾರಾಷಿೊಥಯ ಪ್ರವಾಸೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ಪ್ರವಾಸೋದ್ಯಮದಲ್ಲಿ ವಿಶ್ವ ಗಮನ ಸೆಳೆದಿರುವ ಮೈಸೂರು - ಬಳ್ಳಾರಿ ಜಿಲ್ಲಾ ಉದ್ಯಮಿಗಳಿಗೆ ಒಡಂಬಡಿಕೆಯು ಅಭಿವೃದ್ಧಿಗೆ ಸಾಕಷ್ಟು ಪೂರಕವಾಗಿದೆ ಎಂದರು. ಎರೆಡೂ ಸಂಸ್ಥೆಗಳ ವಿವಿಧ ಉಪ ಸಮಿತಿಗಳ ಚೇರ್ಮೆನ್‌ಗಳು ಕೈಗಾರಿಕೆ, ವಾಣಿಜ್ಯ, ಸೇವಾ ವಲಯ ಮತ್ತು ಇನ್ನಿತರೆ ವಿಚಾರಗಳ ಕುರಿತು ವಿಚಾರಗಳನ್ನು ವಿನಿಯಮ ಮಾಡಿಕೊಂಡರು.  

ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಖಜಾಂಚಿ ಅಶೋಕ್ ಎಸ್‌.ಜೆ. ಅವರು ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಶಿವಾಜಿರಾವ್ ಎ.ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಆನಂದ್ ಆರ್‌. ಅವರು ವಂದಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಅವ್ವಾರು ಮಂಜುನಾಥ್, ಉಪಾಧ್ಯಕ್ಷರುಗಳಾದ ಎಸ್‌. ದೊಡ್ಡನಗೌಡ, ಸೊಂತ ಗಿರಿಧರ, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ, ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮಾಜಿ ಅಧ್ಯಕ್ಷ ಸುಧಾಕರ ಎಸ್‌. ಶೆಟ್ಟಿ ಹಾಗೂ ಎರೆಡೂ ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.ಋ