ಬಳ್ಳಾರಿ ಗಲಭೆ: ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಒತ್ತಾಯ
Bellary riots: Demand action against the culprits
ಲೋಕದರ್ಶನ ವರದಿ
ಹೂವಿನಹಡಗಲಿ 9: ಇತ್ತೀಚೆಗೆ ಬಳ್ಳಾರಿಯ ಮಾಜಿ ಸಚಿವ ಗಂಗಾವತಿಯ ವಿಧಾನಸಭಾ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಗೆ ನುಗ್ಗಿ ದಂಧಾಲೆ ನಡೆದಿರುವುದನ್ನು ವಿಜಯನಗರ ಬಿಜೆಪಿ ಪಕ್ಷದ ಮುಖಂಡ ಎಂ.ಬಿ.ಬಸವರಾಜ ತೀವ್ರವಾಗಿ ಖಂಡಿಸಿದರು.
ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ವ್ಯಕ್ತಿ ಜೀವ ತೆಗೆದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಘಟನೆ ಮರು ಕಳಿಸದಂತೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳವ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದರು. ಕೂಡಲೇ ಸರ್ಕಾರ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಹಡಗಲಿಯಿಂದ ಬಳ್ಳಾರಿವರೆಗೆ ಸರ್ಕಾರ ವಿರುದ್ಧ ಪಾದಯಾತ್ರೆಯನ್ನು ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದಿಂದ ಹಮ್ಮಿಕೊಳ್ಳಲಾಗುವುದು ಬಿಜೆಪಿ ಪಕ್ಷದ ಜಿಲ್ಲಾ ಮುಖಂಡ ಎಂ.ಬಿ.ಬಸವರಾಜ ಎಚ್ಚರಿಸಿದರು. ರಾಜಕೀಯ ವೈಷಮ್ಯದಿಂದ ಪ್ರೇರಿತವಾಗಿ ಪ್ರತಿಪಕ್ಷದ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ಈ ದಾಳಿಗಳು ಕಾಂಗ್ರೆಸ್ ಸರ್ಕಾರದ ಜನವಿರೋಧಿ ಮನೋಭಾವವನ್ನು ಸ್ಪಷ್ಟವಾಗಿ ತೋರಿಸುತ್ತವೆ. ಆಡಳಿತದ ವೈಫಲ್ಯಗಳನ್ನು ಮರೆಮಾಚಲು ಹಾಗೂ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರ ಇಂತಹ ಕುಮ್ಮಕ್ಕುಗಳು ಮತ್ತು ದಮನ ನೀತಿಗಳನ್ನು ಅನುಸರಿಸತ್ತಿದೆ.
ದೇಶದಲ್ಲಿ ಮೂರು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಇದ್ದು, ಮುಂದಿನ ದಿನದಲ್ಲಿ ಕಾಂಗ್ರೆಸ್ ಮುಕ್ತ ವಾಗಲಿದೆ ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 