ಬಳ್ಳಾರಿ; ಮತ ಎಣಿಕೆ ಸೂಕ್ತ ಬಂದೋಬಸ್ತ್: ಎಸ್ಪಿ ನಿಂಬರಗಿ

ಲೋಕದರ್ಶನ ವರದಿ

ಬಳ್ಳಾರಿ 21: ಮತ ಎಣಿಕೆ ಕೇಂದ್ರದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಪಿಕೆಟಿಂಗ್ ಪಾಯಿಂಟ್ಗಳನ್ನು ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ಮತ ಎಣಿಕೆ ಕೇಂದ್ರದ ಮಾಧ್ಯಮ ಕೇಂದ್ರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮತ ಎಣಿಕೆ ಕೇಂದ್ರಕ್ಕೆ 3 ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. 6 ಜನ ಡಿವೈಎಸ್ಪಿ, 16 ಜನ ಇನ್ಸಪೆಕ್ಟರ್ಗಳು, 19 ಜನ ಪಿಎಸ್ಐಗಳು, ಮುಖ್ಯಪೇದೆ, ಪೊಲೀಸ್ ಪೇದೆಗಳು, ಹೋಮ್ ಗಾಡ್ಸರ್್ಗಳು ಸೇರಿದಂತೆ ಒಟ್ಟು 490 ಜನರನ್ನು ಭದ್ರತಾವ್ಯವಸ್ಥೆಗೆ ನಿಯೋಜಿಸಲಾಗಿದೆ. ಇದರ ಜತೆಗೆ  4 ಡಿಎಆರ್ ಪಡೆಗಳನ್ನು ನೇಮಿಸಲಾಗಿದೆ ಎಂದು ವಿವರಿಸಿದರು.

ಮೇ 22ರ ಮಧ್ಯರಾತ್ರಿಯಿಂದ ಮೇ 23ರ ಮಧ್ಯರಾತ್ರಿಯವರೆಗೆ ಮದ್ಯಪಾನ ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಡಿವೈಎಸ್ಪಿ ಜನಾರ್ಧನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ  ಬಿ.ಕೆ.ರಾಮಲಿಂಗಪ್ಪ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಮತ್ತಿತರರು ಇದ್ದರು.