ಕೊಪ್ಪಳ 07: ಸಹಕಾರ ಕ್ಷೇತ್ರದ ಬಲವರ್ಧನೆಯಿಂದ ದೇಶದ ಆರ್ಥಿಕತೆಗೆ ಲಾಭವಾಗಲಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷ ಡಾ.ಶೇಖರಗೌಡ ಮಾಲಿ ಪಾಟೀಲ ಹೇಳಿದರು.
ಇತ್ತೀಚಿಗೆ ನಡೆದ ಬೆಂಗಳೂರಿನ ಕನರ್ಾಟಕ ರಾಜ್ಯ ಸಹಕಾರ ಮಹಾಮಂಡಳ ನಿಗಮ, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನಿಗಮ ಹಾಗೂ ಜಿಲ್ಲಾ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ (ಮಾ.06ರಂದು) ನಗರದ ಭಾಗ್ಯನಗರದಲ್ಲಿರುವ ಪಾನಗಂಟಿ ಮಂಗಲ ಭವನದಲ್ಲಿ ರಾಜ್ಯ ಮಟ್ಟದ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಹಾಲು ಉತ್ಪಾದಕರ ಸಹಕಾರ ಸಂಘಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹಳ್ಳಿಯ ಜನರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಉಪಕಸಬನ್ನಾಗಿ ಮಾಡಿಕೊಂಡು ಅಭಿವೃದ್ಧಿಯತ್ತ ಸಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸಿದಲ್ಲಿ ದೇಶದ ಆಥರ್ಿಕತೆಗೆ ತುಂಬಾ ಲಾಭದಾಯಕವಾಗಲಿದೆ ಎಂದರು.
ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಶಿವಪ್ಪ ವಾದಿ ಉದ್ಘಾಟಿಸಿ ಮಾತನಾಡಿದ ಅವರು ತರಬೇತಿ ಎನ್ನುವುದು ಒಂದು ನಿರಂತರ ಪ್ರಕ್ರಿಯೆಯಾಗಿದ್ದು ಜಿಲ್ಲಾ ಸಹಕಾರ ಯೂನಿಯನ್ ಅನೇಕ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಇಂತಹ ತರಬೇತಿಯ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆಯಬೇಕೆಂದು ಕರೆ ನೀಡಿದರು.
ಒಕ್ಕೂಟದ ನಿರ್ದೇಶಕರಾದ ವೆಂಕನಗೌಡ ಹಿರೇಗೌಡರ್, ಸಹಕಾರ ಸಹಾಯಕ ನಿಬಂಧಕರಾದ ಬಿ.ಎ. ಕೇಸರಿಮಠ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂಸ್ಥೆಯ ನಿದರ್ೆಶಕರುಗಳಾದ ಶಕುಂತಲಾ ಹೆಚ್. ಹುಡೇಜಾಲಿ, ಮಾರುತಿ ಅಂಗಡಿ, ಅಮರೇಶ ಉಪಲಾಪೂರ, ಸಾವಿತ್ರಮ್ಮ ಮಲ್ಲಪ್ಪ ಮತ್ತು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಬುಕ್ಕಾ ಮಲ್ಲಿಕಾರ್ಜುನ, ಸಹಕಾರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಎಂ.ಜಿ. ಪಾಟೀಲ ಹಾಗೂ ಇತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಮುನ್ನ ರಾಜ್ಮಾ ಅವರು ಪ್ರಾಥರ್ಿಸಿದರು. ಜಿಲ್ಲಾ ಸಹಕಾರ ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಹಕಾರ ಯೂನಿಯನ್ನಿನ ಉಪಾಧ್ಯಕ್ಷ ತೋಟಪ್ಪ ಕಾಮನೂರುರವರು ಕೊನೆಯಲ್ಲಿ ವಂದಿಸಿದರು.