ಬೆಂಗಳೂರು: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿ ರಚನೆ
ಬೆಂಗಳೂರು 07: ಚಲನಚಿತ್ರ ರಂಗದ ಖ್ಯಾತ ನಟ ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕನ್ನಡದ ಮೇರು ನಟರಾದ ಡಾ ರಾಜ್ ಕುಮಾರ್ ಮತ್ತು ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ, ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನಕ್ಕಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.
ಪ್ರತಿಷ್ಠಾನಕ್ಕೆ ಆಡಳಿತಾತ್ಮಕ ನಿರ್ಣಯ, ರೂಪು ರೇಷೆ, ಅನುಷ್ಠಾನ ಹಾಗೂ ಕಾರ್ಯಕ್ರಮಗಳ ನಿರ್ವಹಣೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ 8 ಸದಸ್ಯರ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಅಥವಾ ನಿರ್ದೇಶಕರು, ಅಂಬರೀಷ್ ಅವರ ಪತ್ನಿ ಸುಮಲತ, ಅಂಬರೀಷ್ ಅವರ ಪುತ್ರ ಶ್ರೀ ಅಭಿಷೇಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ ಸದಸ್ಯರಾಗಿರುವ ಈ ಸಮಿತಿಗೆ ಶ್ರೀ ಕಠೀರವ ಸ್ಟೂಡಿಯೋದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 