ಸಿಎಂ ಬಗ್ಗೆ ಅವರ ಬಗ್ಗೆ ಅವಹೇಳನ ಮಾಡಿದ ಆರೋಪಿಗಳಿಗೆ ಗಡಿಪಾರು ಮಾಡಬೇಕು : ಫಕ್ಕಿರಪ್ಪಹೆಬಸೂರ
Bengaluru Chalo on August 19th, demanding the enactment of the Prevention of Atrocities on Shepherds
ಕುರಿಗಾಹಿಗಳ ಮೇಲೆ ದೌರ್ಜನ್ಯತಡೆ ಕಾಯ್ದೆಜಾರಿಗಾಗಿ ಆಗ್ರಹಿಸಿ ಆ.19 ರಂದು ಬೆಂಗಳೂರ ಚಲೋ
ಗದಗ 13: ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು ಮತ್ತು ಕುರಿಗಾರರ ರಕ್ಷಣೆಗೆ ವಿಶೇಷ ಕಾಯ್ದೆ ಜಾರಿ ಮಾಡಬೇಕು ಎಂದು ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕಿರ್ಪ ಹೆಬಸೂರ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಕ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂಧನೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಈ ಬಗ್ಗೆ ರಾಜ್ಯಾದ್ಯಾಂತ ಹೋರಾಟ ಮಾಡಲಾಗುವುದು ಯಾರೆ ಆಗಲಿ ಯಾವುದೆ ಸಮುದಾಯ ಬಗ್ಗೆ ಅವಹೇಳನ ಮಾಡಬಾರದು ಎಂದು ಹೇದ ಅವರು ಇತ್ತಿಚಿಗೆ ಅರಣ್ಯ ಸಚಿವರು ಕಾಡಿನಲ್ಲಿ ಕುರಿಗಳನ್ನು ಬಿಡಬಾರದು ಎಂದು ಹೇಳಿರುವದು ಖಂಡನಿಯವಾಗಿದೆ. ಕುರಿಗಾರರ ರಕ್ಷಣೆಗಾಗಿ ಕುರುಬರ ಸಂಘ ಮತ್ತು ಹಾಲುಮತ ಮಹಾಸಭಾದಿಂದ ಪಕ್ಷಾತೀತವಾಗಿ ಹೋರಾಟ ಮಾಡಲಾಗುವದು ಎಂದು ಹೇಳಿದರು.
ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಅವರು ಮಾತನಾಡಿ, ರಾಜ್ಯದಲ್ಲಿರುವ ಶೋಷಿತ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳು ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿ ಹಾಗೂ ಜೀವನವನ್ನು ನಿಭಾಯಿಸುವ ಸಾಂಪ್ರದಾಯಿಕ ಕುಲ ಕಸಬಾಗಿರುತ್ತದೆ. ಬೆಟ್ಟ-ಗುಡ್ಡಗಳನ್ನು ಒಳಗೊಂಡಂತೆ ಆಯಾ ಪ್ರದೇಶಕ್ಕನುಗುಣವಾಗಿ ಸ್ಥಳೀಯವಾಗಿ ಹಾಗೂ ಹೊರಗೂ ಸಂಚರಿಸುವ ಮೂಲಕ ಪಾಲನೆ ಮಾಡುತ್ತಿದ್ದು, ಈ ಕುರಿಗಾರಿಕೆ ಬಡವರ ಪಾಲಿಗೆ ವರದಾನವಾಗಿರುತ್ತದೆ. ಆದರೆ ಆಧುನಿಕತೆ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ಕುರಿಗಳಿಗೆ ಮೇವು ಸಿಗದಂತಾಗಿದ್ದು ಕುರಿಗಾರರು ಈಗ ಹೊರಗಿನ ಅಂದರೆ ಬೆಟ್ಟ-ಗುಡ್ಡಗಳನ್ನು ಪೂರ್ಣವಾಗಿ ಅವಲಂಬಿಸಿ ತನ್ನ ದಿನನಿತ್ಯದ ಕಾಯಕದಲ್ಲಿ ತೊಡಗಿರುವಾಗ ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿರುವ ಬಹಳಷ್ಟು ಉದಾಹರಣೆಗಳಿದ್ದು ಮತ್ತು ಹೋಗಿ ಬರುವ ದಾರಿಯಲ್ಲಿ ವಾಹನಗಳಿಂದ ಬಹಳಷ್ಟು ಅಪಘಾತಗಳಾಗಿ ಕುರಿಗಾಹಿಯ ಪ್ರಾಣಹಾನಿ ಹಾಗೂ ಅಸಂಖ್ಯಾತ ಕುರಿಗಳ ಮಾರಣಹೋಮ ನಡೆದಿದೆ. ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ, ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಕುರಿಗಾಹಿ ಪ್ರಭು ಮೇತ್ರೆ ಇವರನ್ನು ಕುರಿಗಳ್ಳರು ಕೊಲೆ ಮಾಡಿದ್ದು ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಲಕ್ಷಿ-್ಮ ಕಳ್ಳಿಮನಿ ಎಂಬ ಕುರಿಗಾಹಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕ್ರೂರವಾಗಿ ಕೊಲೆ ಮಾಡಿರುವಂತಹ ನಿದರ್ಶನಗಳು ಮಾನವಿಯತೆಯನ್ನು ಪ್ರಶ್ನಿಸುತ್ತವೆ. ರಾಜ್ಯದಲ್ಲಿರುವ ಗುಡ್ಡುಗಾಡು ಪ್ರದೇಶಗಳಲ್ಲಿ ಕುರಿ ಮೇಯಿಸಲು ಹೋದಾಗ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಹಾಗೂ ಸಿಬ್ಬಂದಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಗಳು ನಡೆಯುತ್ತಿವೆ.
ಸರ್ಕಾರವು ಎಲ್ಲ ವರ್ಗದ ಮಹಿಳೆಯರ ಪರ, ಮಕ್ಕಳ ಪರ, ಶೋಷಿತ ಸಮುದಾಗಳ ಪರ ಹಾಗೂ ವಿವಿಧ ವೃತ್ತಿಪರರ ಹಿತರಕ್ಷಣೆಗೆ ವಿವಿಧ ವಿಶೇಷ ಕಾಯ್ದೆಗಳನ್ನು ಜಾರಿ ಮಾಡಿ ಅವರ ರಕ್ಷಣೆ ಮಾಡಿದ್ದು ಅದೇ ರೀತಿ ಕುರಿಗಾಹಿಕೆಯಿಂದ ಜೀವನ ನಡೆಸುತ್ತಿರುವ ಕುರಿಗಾರ ಮತ್ತು ಆತನ ಪರಿವಾರದ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯಗಳಂತಹ ದುಷ್ಕೃತ್ಯಗಳ ಕಡಿವಾಣಕ್ಕಾಗಿ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೆ ತರಬೇಕೆಂದು ರಾಜ್ಯ ಘನ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಗರಾಜ ಮೆಣಸಗಿ, ನಾಗಪ್ಪ ಗುಗ್ಗರಿ, ಸೋಮನಗೌಡ ಪಾಟೀಲ, ಬಸಪ್ಪ ಶಿರೂರ, ರಾಘು ವಗ್ಗನವರ, ಮೋಹನ ಇಮರಾಪೂರ, ಮುತ್ತು ಜಡಿ, ಸತೀಶ ಗಿಡ್ಡಹನುಮಣ್ಣವರ, ಹನುಮಂತ ಗಿಡ್ಡಹನುಮಣ್ಣವರ, ಆನಂದ ಜೋಗಾಡಿ, ಬಸಪ್ಪ ಗಿಡ್ಡಹನುಮಣ್ಣವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಸರ್ಕಾರವು 2024-25 ನೇ ಸಾಲಿನ ಬಜೆಟ್‌ನಲ್ಲಿ ಕುರಿಗಾಹಿಗಳಿಗೆ ಸಂಬಂಧಿಸಿದಂತೆ ದೌರ್ಜನ್ಯ ತಡೆ ಕಾಯ್ದೆ ರೂಪಿಸಲು ಪ್ರಸ್ಥಾಪಿಸಿದ್ದು ಈಗ ಸರ್ಕಾರವು ಆಗಸ್ಟ್ 11 ರಿಂದ ನಡೆಯಲಿರುವ ಅಧಿವೇಶನದಲ್ಲಿ ಕಾಯ್ದೆಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ "ಕುರಿಗಾರರ ನಡಿಗೆ ವಿಧಾನಸೌಧ ಕಡೆಗೆ" ಎಂಬ ಘೋಷಣಾ ವಾಕ್ಯದೊಂದಿಗೆ ಬೆಂಗಳೂರಿನ ಸ್ವಾತಂತ್ರ-್ಯ ಉದ್ಯಾನವನದಲ್ಲಿ ಆಗಸ್ಟ್ 19 ರಂದು ರಾಜ್ಯದ ಎಲ್ಲಾ ಭಾಗಗಳ ಕುರಿಗಾಹಿಗಳು ಸೇರಿ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಗಿದೆ.
ರುದ್ರಣ್ಣ ಗುಳಗುಳಿ, ರಾಜ್ಯಾಧ್ಯಕ್ಷರು ಹಾಲುಮತ ಮಹಾಸಬಾ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 