ಬೆಸ್ಟ್ ಟ್ಯಾಲೆಂಟ್: ಸ್ಕಾಲರ್ಶಿಪ್ ಪರೀಕ್ಷೆ
Best Talent: Scholarship Exam
ಬೆಸ್ಟ್ ಟ್ಯಾಲೆಂಟ್: ಸ್ಕಾಲರ್ಶಿಪ್ ಪರೀಕ್ಷೆ
ತಾಳಿಕೋಟಿ 05: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆ ಅಡಿಯಲ್ಲಿರುವ ಬೆಸ್ಟ್ ಪಿ.ಯು ಸೈನ್ಸ್ ಕಾಲೇಜಿನಲ್ಲಿ ಏಪ್ರೀಲ್ 7ರಂದು 11.30 ರಿಂದ 12.30ರವರೆಗೆ ಬೆಸ್ಟ್ ಟ್ಯಾಲೆಂಟ್ ಏಕ್ಸಾಮ್ 2025ರ ಸ್ಕಾಲರ್ಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ವಿವೇಕಾನಂದ ಸಜ್ಜನ್ ಅವರು ತಿಳಿಸಿದರು.
ಬೆಸ್ಟ್ ಪಿ.ಯು ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಮಾಲಿಪಾಟೀಲ್ ರವರು ಮಾತನಾಡಿ ಈ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ, ಹಾಗೂ ತೃತಿಯ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು 4 ರಿಂದ 10ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.75 ಕಾಲೇಜು ಫೀ ಯಲ್ಲಿ ವಿನಾಯಿತಿ ನೀಡಲಾಗುವುದು. 11 ರಿಂದ 20 ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.50 ಕಾಲೇಜು ಫೀ ಯಲ್ಲಿ ವಿನಾಯಿತಿ ನೀಡಲಾಗುವುದು, ಹಾಗೂ 21 ರಿಂದ 30 ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.25 ಕಾಲೇಜು ಫೀ ಯಲ್ಲಿ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು. ಘನಮಠೇಶ್ವರ ಆಂಗ್ಲಮಾದ್ಯಮ ಫ್ರೌಡಶಾಲೆಯ ಪ್ರಾಂಶುಪಾಲ ಬಸವರಾಜ ಸಜ್ಜನ್ ರವರು ಮಾತನಾಡಿ ಈ ಬಾರಿ ಎಸ್.ಎಸ್. ಎಲ್.ಸಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಬೆಸ್ಟ್ ಟ್ಯಾಲೆಂಟ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 