ಉತ್ತಮ ಶಿಕ್ಷಕಿ ಚಂದ್ರಕಾ ನವಲೆಗೆ ಶಿಕ್ಷಕ ಪ್ರಶಸ್ತಿ
Best Teacher Award for teacher Chandrika Navale
ಧಾರವಾಡ, 08 : ತಾಲೂಕಿನ ಮಾರಡಗಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಚಂದ್ರಿಕಾ ನವಲೆ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದ್ದು, ತಾಲೂಕಾ ಮಟ್ಟದ ಶಿಕ್ಷಕ ದಿನೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಶಿಕ್ಷಕರು ಪ್ರಶಸ್ತಿಗೆ ಅರ್ಜಿ ಹಾಕದೇ, ನೇರವಾಗಿ ಧಾರವಾಡ ಗ್ರಾಮೀಣ ಬಿಇಓ ರಾಮಕೃಷ್ಣ ಸದಲಗಿ ಅವರೇ ಶಿಕ್ಷಕರ ಬೋಧನಾ ಕೌಶಲ್ಯ ಮತ್ತು ಮಕ್ಕಳಿಗಾಗಿ ಶಾಲೆಯಲ್ಲಿ ಕೈಕೊಂಡ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಗಣಿಸಿ ಚಂದ್ರಿಕಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಈ ಬಾರಿಯ ವಿಶೇಷತೆ. ಮುಖ್ಯಾಧ್ಯಾಪಕಿ ವಿಜಯಲಕ್ಷ್ಮಿ ಅರ್ಕಸಾಲಿ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಫಕ್ಕೀರ್ಪ ವನಹಳ್ಳಿ ಪ್ರಶಸ್ತಿ ಪಡೆದ ಅಧ್ಯಾಪಕಿಯನ್ನು ಅಭಿನಂದಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 