ಕೋರವಾರ ಪಿಕೆಪಿಎಸ್ ಗೆ ಅತ್ಯುತ್ತಮ ಪ್ರಶಸ್ತಿ ಪ್ರದಾನ
Best award presented to Korwar PKPS
ದೇವರಹಿಪ್ಪರಗಿ, 31 : ತಾಲೂಕಿನ ಕೋರವಾರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅಖಂಡ ಸಿಂದಗಿ ತಾಲ್ಲೂಕು ವ್ಯಾಪ್ತಿಯ ಅತ್ಯುತ್ತಮ ಪಿಕೆಪಿಎಸ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶನಿವಾರದಂದು ವಿಜಯಪುರ ಡಿಸಿಸಿ ಬ್ಯಾಂಕಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಜವಳಿ, ಸಕ್ಕರೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಗುಣಮಟ್ಟದ ಸೇವೆ ನೀಡಿದ ಅಖಂಡ ಸಿಂದಗಿ ತಾಲೂಕು ವ್ಯಾಪ್ತಿಯ ಈ ವರ್ಷದ ಅತ್ಯುತ್ತಮ ಪಿಕೆಪಿಎಸ್ ಪ್ರಶಸ್ತಿಯನ್ನು ಕೋರವಾರ ಪಿಕೆಪಿಎಸ್ ಅಧ್ಯಕ್ಷರಾದ ಸಂಗಮೇಶ ಛಾಯಗೋಳ ಹಾಗೂ ಸಿಇಒ ಅವರಿಗೆ ಪ್ರಶಸ್ತಿ ನೀಡಿ, ಶುಭ ಹಾರೈಸಿ, ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವ್ಹಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ, ಡಿಸಿಸಿ ಬ್ಯಾಂಕ್ ಸಿಇಒ ಎಸ್.ಎ.ಢವಳಗಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಎಸ್.ಕೆ. ಭಾಗ್ಯಶ್ರೀ, ನಿರ್ದೇಶಕರುಗಳಾದ ಬಿ.ಎಸ್.ಪಾಟೀಲ(ಯಾಳಗಿ), ಹಣುಮಂತ್ರಾಯಗೌಡ ಪಾಟೀಲ(ಪಡಗಾನೂರ) ಸೇರಿದಂತೆ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 