ಬೆಟಗೇರಿ:ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ
Betageri: Celebration of Shivasharana Hadapada Appanna's Jayanti
ಲೋಕದರ್ಶನ ವರದಿ
ಬೆಟಗೇರಿ 29: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.29 ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಶಿವಾನಂದ ಪತ್ತಾರ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು.
ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರ, ವಿಠ್ಠಲ ಚಂದರಗಿ, ಶಿವಾನಂದ ಐದುಡ್ಡಿ, ಈರ್ಪ ದಂಡಿನ, ಸಿದ್ರಾಮ ಚಂದರಗಿ, ಮೆಳೆಪ್ಪ ಹರಿಜನ, ಸಾಂವಕ್ಕಾ ಹರಿಜನ, ಲಕ್ಕಮ್ಮ ಚಂದರಗಿ, ಲಕ್ಕವ್ವ ಆಶೆಪ್ಪಗೋಳ, ಬಸವರಾಜ ನಾವಿ, ಕಲ್ಲಪ್ಪ ಹಡಪದ, ಅರ್ಜುನ ಹರಿಜನ ಸೇರಿದಂತೆ ಗ್ರಾಪಂ ಮಾಜಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಸ್ಥಳೀಯ ಹಡಪದ ಸಮಾಜದ ಹಿರಿಯರು, ಕಿರಿಯ ನಾಗರಿಕರು, ಸ್ಥಳೀಯರು, ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 