ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ
Betageri Maruti Devara Okuli from June 7th
ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ
ಬೆಟಗೇರಿ, 06 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ. ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 ಗಂಟೆಗೆ ನಡು ಓಕುಳಿ. ಜೂ.9ರಂದು 8 ಗಂಟೆಯಿಂದ ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರೆ್ಣ ನಡೆದು, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷೀಣೆ ಬಳಿಕ ಕಡೆ ಓಕಳಿ ನಡೆಯಲಿದ್ದು, ವಿವಿಧ ಪ್ರಾಣಿಗಳ ಸೊಗಿನ ಕುಣಿತದ ಪ್ರದರ್ಶನ, ಅದೇ ದಿನ ರಾತ್ರಿ 10.30ಕ್ಕೆ ತುಳಸಿಗೇರಿ ಜೈ ಹನುಮಾನ ನಾಟ್ಯ ಸಂಘದವರಿಂದ ಶ್ರೀ ಕೃಷ್ಣಪಾರಿಜಾತ ಕಲಾಸಂಘದವರಿಂದ ನಾಟಕ ಪ್ರದರ್ಶನ ಜರುಗಲಿದೆ. ಮಂಗಳವಾರ ಜೂ.10ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 4 ಗಂಟೆಗೆ ಜಂಗಿ ಕುಸ್ತಿಗಳು ನಡೆದ ಬಳಿಕ ಸಂಜೆ ಮಾರುತಿ ದೇವರ ದೇವಾಲಯಕ್ಕೆ ಪಲ್ಲಕ್ಕಿ ಪ್ರರ್ದಕ್ಷಣೆ ನಡೆಯಲಿದೆ ಎಂದು ಇಲ್ಲಿಯ ಮಾರುತಿ ದೇವರ ಓಕುಳಿ ಉತ್ಸವ ಆಚರಣಾ ಸಮಿತಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 